ETV Bharat / state

ಏಕರೂಪದ ಮಾದರಿ ನೀತಿ ಶೀಘ್ರದಲ್ಲಿಯೇ ಜಾರಿ: ಜಗದೀಶ ಶೆಟ್ಟರ್​ - ಜಗದೀಶ ಶೆಟ್ಟರ್​ ಹೇಳಿಕೆ

ವಿವಿಧ ರೀತಿಯ ಕೈಗಾರಿಕೆಗಳಿಂದ ಗ್ರಾಮ ಪಂಚಾಯತ್​ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುವ ತೆರಿಗೆ ಕುರಿತು ಏಕರೂಪತೆಯನ್ನು ತರಲು ತೆರಿಗೆ ಆಕರಣೆ ಕುರಿತು ಮಾದರಿ ನೀತಿಯನ್ನು ಶೀಘ್ರದಲ್ಲಿಯೇ ರೂಪಿಸಿ ಅನುಷ್ಠಾನಗೊಳಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ರು.

Jagadish Shetter
ಏಕರೂಪದ ಮಾದರಿ ನೀತಿಯನ್ನು ಶೀಘ್ರದಲ್ಲಿಯೇ ಜಾರಿ: ಜಗದೀಶ ಶೆಟ್ಟರ್​
author img

By

Published : Dec 29, 2019, 11:13 AM IST

ಧಾರವಾಡ: ವಿವಿಧ ರೀತಿಯ ಕೈಗಾರಿಕೆಗಳಿಂದ ಗ್ರಾಮ ಪಂಚಾಯತ್​ಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುವ ತೆರಿಗೆ ಕುರಿತು ಏಕರೂಪತೆಯನ್ನು ತರಲು ತೆರಿಗೆ ಆಕರಣೆ ಕುರಿತು ಮಾದರಿ ನೀತಿಯನ್ನು ಶೀಘ್ರದಲ್ಲಿಯೇ ರೂಪಿಸಿ ಅನುಷ್ಠಾನಗೊಳಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಂಯುಕ್ತವಾಗಿ ಆಯೋಜಿಸಿದ್ದ ಮುಮ್ಮಿಗಟ್ಟಿ ನರೇಂದ್ರ ವಸತಿ ಬಡಾವಣೆ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುಮ್ಮಿಗಟ್ಟಿ ನರೇಂದ್ರ ವಸತಿ ಬಡಾವಣೆಯಲ್ಲಿ ನಿಜವಾದ ಉದ್ಯಮಿಗಳಿಗೆ ಮತ್ತು ಕಾರ್ಮಿಕರಿಗೆ ವಸತಿಗಳನ್ನು ಹಂಚಿಕೆ ಮಾಡಲಾಗುವುದು. ಯಾವುದೇ ರೀತಿಯ ಒತ್ತಡ, ಶಿಪಾರಸುಗಳಿಗೆ ಒಳಗಾಗದೆ ಪಾರದರ್ಶಕವಾಗಿ ವಸತಿಗಳನ್ನು ನೀಡಲಾಗುವುದು. ಈ ಬಡಾವಣೆಯ ನಿರ್ಮಾಣ ಕಾಮಗಾರಿಗಳಿಗೆ ಈಗಾಗಲೇ 44 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಶೀಘ್ರದಲ್ಲೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು. ಈ ನೀತಿಯಲ್ಲಿ ದ್ವಿತೀಯ ಹಂತದ ನಗರಗಳಿಗೆ ಆದ್ಯತೆ ನೀಡಿ, ಕೈಗಾರಿಕೆಗಳ ಕೇಂದ್ರಿಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಮತ್ತು ಹಿಂದುಳಿದ ಹಾಗೂ ತಾರತಮ್ಯಕ್ಕೆ ಒಳಗಾದ ಪ್ರದೇಶಗಳಿಗೆ ಪ್ರಾಮುಖ್ಯತೆ ನೀಡಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುವುದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಂಗಳೂರು, ಮೈಸೂರುದಂತಹ ಮಹಾನಗರಗಳ ಹೊರತಾಗಿ ಬೆಳಗಾವಿ, ಧಾರವಾಡ, ವಿಜಯಪುರ, ದಾವಣಗೆರೆ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗದಂತಹ ದ್ವಿತೀಯ ಹಂತದ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು ಮತ್ತು ಸ್ಥಳೀಯರಿಗೆ ಉದ್ಯೊಗಾವಕಾಶಗಳನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಫೆ.14ರಂದು ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುತ್ತಿದೆ. ಈಗಾಗಲೇ ಪುಣೆ, ಮುಂಬೈದಂತಹ ಮಹಾನಗರಗಳಲ್ಲಿ ರೋಡ್ ಶೋ ನಡೆಸಲಾಗಿದೆ. ಅಲ್ಲಿನ ಬೃಹತ್ ಉದ್ಯಮಿಗಳ ಜೊತೆಗೆ ಚರ್ಚಿಸಿ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಲು ಹಾಗೂ ಅವರ ಉದ್ಯಮಗಳನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಲು ಮನವೊಲಿಸಲಾಗಿದೆ ಎಂದು ಶೆಟ್ಟರ್ ತಿಳಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ಭೂಮಿಯ ಅಗತ್ಯವಿದ್ದು, ಅನೇಕ ರೈತರು ತಮ್ಮ ಜಮೀನುಗಳನ್ನು ನೀಡಿದ್ದಾರೆ. ಅವರಿಗೆ ಸರ್ಕಾರ ಹಾಗೂ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಚಿವ ಜಗದೀಶ್​ ಶೆಟ್ಟರ್​ ವಿವರಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

Intro:ಧಾರವಾಡ: ವಿವಿಧ ರೀತಿಯ ಕೈಗಾರಿಕೆಗಳಿಂದ ಗ್ರಾಮ ಪಂಚಾಯತಿಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುವ ತೆರಿಗೆ ಕುರಿತು ಏಕರೂಪತೆಯನ್ನು ತರಲು ತೆರಿಗೆ ಆಕರಣೆ ಕುರಿತು ಮಾದರಿ ನೀತಿಯನ್ನು ಶೀಘ್ರದಲ್ಲಿಯೇ ರೂಪಿಸಿ ಅನುಷ್ಠಾನಗೊಳಿಸುವುದಾಗಿ ಬೃಹತ್ ಮತ್ತು ಮದ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ ಶೆಟ್ಟರ ಹೇಳಿದರು.
         
ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಂಯುಕ್ತವಾಗಿ ಆಯೋಜಿಸಿದ್ದ ಮುಮ್ಮಿಗಟ್ಟಿ ನರೇಂದ್ರ ವಸತಿ ಬಡಾವಣೆ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದರು.
         
ಮುಮ್ಮಿಗಟ್ಟಿ ನರೇಂದ್ರ ವಸತಿ ಬಡಾವಣೆಯಲ್ಲಿ ನಿಜವಾದ ಉದ್ಯಮಿಗಳಿಗೆ ಮತ್ತು ಕಾರ್ಮಿಕರಿಗೆ ವಸತಿಗಳನ್ನು ಹಂಚಿಕೆ ಮಾಡಲಾಗುವುದು. ಯಾವುದೇ ರೀತಿಯ ಒತ್ತಡ, ಶಿಪಾರಸ್ಸುಗಳಿಗೆ ಒಳಗಾಗದೆ ಪಾರದರ್ಶಕವಾಗಿ ವಸತಿಗಳನ್ನು ನೀಡಲಾಗುವುದು. ಈ ಬಡಾವಣೆಯ ನಿರ್ಮಾಣ ಕಾಮಗಾರಿಗಳಿಗೆ ಈಗಾಗಲೇ 44 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
         
ಶೀಘ್ರದಲ್ಲಿ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು. ಈ ನೀತಿಯಲ್ಲಿ ದ್ವಿತೀಯ ಹಂತದ ನಗರಗಳಿಗೆ ಆದ್ಯತೆ ನೀಡಿ, ಕೈಗಾರಿಕೆಗಳ ವಿಕೇಂದ್ರಿಕರಣಕ್ಕೆ ಕ್ರಮಕೈಗೊಳ್ಳಲಾಗುವುದು ಮತ್ತು ಹಿಂದುಳಿದ ಹಾಗೂ ತಾರತಮ್ಯಕ್ಕೆ ಒಳಗಾದ ಪ್ರದೇಶಗಳಿಗೆ ಪ್ರಾಮುಖ್ಯತೆ ನೀಡಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು.Body:ಬರುವ ಫೇಬ್ರವರಿ 14 ರಂದು ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ-ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ. ಬೆಂಗಳೂರು, ಮೈಸೂರುದಂತಹ ಮಹಾನಗರಗಳ ಹೊರತಾಗಿ ಬೆಳಗಾವಿ, ಧಾರವಾಡ, ವಿಜಯಪುರ, ದಾವಣಗೆರೆ, ಹಾವೇರಿ, ಗದಗ, ಬಾಗಲಕೋಟ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗದಂತಹ ದ್ವಿತೀಯ ಹಂತದ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು ಮತ್ತು ಸ್ಥಳೀಯರಿಗೆ ಉದ್ಯೊಗಾವಕಾಶಗಳು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಸಮಾವೇಶ ಸಂಘಟಿಸಲಾಗುತ್ತಿದೆ. ಈಗಾಗಲೇ ಪುಣೆ, ಮುಂಬೈದಂತಹ ಮಹಾನಗರಗಳಲ್ಲಿ ರೋಡ್ ಶೋ ನಡೆಸಲಾಗಿದೆ. ಅಲ್ಲಿನ ಬೃಹತ್ ಉದ್ಯಮಿಗಳ ಜೊತೆಗೆ ಚರ್ಚಿಸಿ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಲು ಹಾಗೂ ಅವರ ಉದ್ಯಮಗಳನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಲು ಮನ ಒಲಿಸಲಾಗಿದೆ ಎಂದು ಅವರು ತಿಳಿಸಿದರು.
         
ಕೈಗಾರಿಕೆಗಳ ಸ್ಥಾಪನೆಗೆ ಭೂಮಿಯ ಅಗತ್ಯವಿದ್ದು, ಅನೇಕ ರೈತರು ತಮ್ಮ ಜಮೀನುಗಳನ್ನು ನೀಡಿದ್ದಾರೆ. ಅವರಿಗೆ ಸರ್ಕಾರ ಹಾಗೂ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವದಾಗಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ಕಾರ್ಯಕ್ರಮದಲ್ಲಿ ವಿದಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಮಾತನಾಡಿದರು. ಅಧಿಕಾರಿಗಳು ಭಾಗವಹಿಸಿದ್ದರು..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.