ಹುಬ್ಬಳ್ಳಿ: ನಗರದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಪ್ರಧಾನ ಕಚೇರಿಯನ್ನು ಪಕ್ಷದ ರಾಜಾಧ್ಯಕ್ಷ ಡಾ. ವೆಂಕಟಸ್ವಾಮಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಗರದ ಚಟ್ನಿ ಕಾಂಪ್ಲೆಕ್ಸ್ನಲ್ಲಿ ಪಕ್ಷದ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ನೂರಾರು ಕಾರ್ಯಕರ್ತರು ಸೇರ್ಪಡೆಗೊಂಡರು. ನಂತರ ಮಾತನಾಡಿದ ಡಾ. ವೆಂಕಟಸ್ವಾಮಿ, ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರು ಘೋಷಣೆ ಮಾಡಿದ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷಕ್ಕೆ ಇಂದಿಗೆ 64 ವರ್ಷಗಳಾಗಿವೆ. ಸಂವಿಧಾನದ ತತ್ವಗಳನ್ನು ಪಾಲಿಸುವ ಪಕ್ಷ ಅಂದರೆ ಅದು ರಿಪಬ್ಲಿಕನ್. ಈಗ ಎಲ್ಲಾ ರಾಜಕೀಯ ಪಕ್ಷಗಳನ್ನು ನೋಡಿ ಅವರ ದುರಾಡಳಿತ ನೋಡಿ ಬೇಸತ್ತ ಜನರು ಈಗ ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷಕ್ಕೆ ಒಲವು ತೋರಿದ್ದಾರೆ. ದಿನದಿಂದ ದಿನಕ್ಕೆ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದರು.
ಹುಬ್ಬಳ್ಳಿ ಧಾರವಾಡದಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು ಸದ್ಯದಲ್ಲೇ ನಡೆಯಲಿವೆ. ಕನಿಷ್ಠ ಅಂದರೂ ಸಹ ಇಪ್ಪತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಕಾಣುವುದದರ ಜೊತೆಗೆ ನಮ್ಮ ಪಕ್ಷದಿಂದ ಹುಧಾ ಪಾಲಿಕೆ ಮೇಯರ್ ಖಂಡಿತವಾಗಿ ಆಗುತ್ತಾರೆ ಎಂಬ ಭರವಸೆ ಇದೆ. ಹುಬ್ಬಳ್ಳಿ ಧಾರವಾಡದಲ್ಲಿ ಜಿಲ್ಲಾ ಮಹಾನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ನೇತೃತ್ವದಲ್ಲಿ ಪಕ್ಷ ಮುಂದುವರೆಯುತ್ತದೆ ಎಂದರು.
ಇನ್ನು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಮಹಾನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತೋಟಗೇರ, ಪಕ್ಷದ ರಾಜ್ಯಾದ್ಯಕ್ಷರು ನಮ್ಮ ಮೇಲೆ ನಂಬಿಕೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ್ದಾರೆ. ಎಲ್ಲಾ ಕಾರ್ಯಕರ್ತರ ಜೊತೆ ಸೇರಿಕೊಂಡು ಪಕ್ಷ ಮುನ್ನಡೆಸುವದಾಗಿ ತಿಳಿಸಿದರು. ನೂರಾರು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.