ETV Bharat / state

ಹುಬ್ಬಳ್ಳಿ: ವೇದಾಂತ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ - ವೇದಾಂತ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಸಭಾಪತಿ ಬಸವರಾಜ ಹೊರಟ್ಟಿ ಯವರು ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ವೇದಾಂತ ಹಾಸ್ಪಿಟಲ್ ಉದ್ಘಾಟಿಸಿದರು.

inauguration-of-vedanta-covid-hospital-in-hubli
ವೇದಾಂತ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ
author img

By

Published : Jun 12, 2021, 2:35 PM IST

Updated : Jun 12, 2021, 4:06 PM IST

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ವೇದಾಂತ ಹಾಸ್ಪಿಟಲ್ ಲೋಕಾರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.

ವೇದಾಂತ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ

ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಿಲ್ಲರ್ ಕೊರೊನಾ ವೈರಸ್ ಧಾರವಾಡ ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಕೊರತೆ ಹೆಚ್ಚಾಗಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೇದಾಂತ ಸಂಸ್ಥೆ ಸಹಭಾಗಿತ್ವದಲ್ಲಿ ಹಾಗೂ ಪ್ರಾಯೋಜಕತ್ವದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಕಿಮ್ಸ್ ಆವರಣದಲ್ಲಿ ಸ್ಥಾಪನೆ ಮಾಡಲಾಗಿದೆ.‌ ಇದಕ್ಕೆ ಕಾರಣಿಭೂತರಾದ ವೇದಾಂತ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಜಗತ್ತಿನ ಯಾವ ದೇಶ ಕೂಡ ರೈಲ್ವೆ ಮೂಲಕ ಆಕ್ಸಿಜನ್ ಸಪ್ಲೈ ಮಾಡಿಲ್ಲ. ಆದರೆ, ಭಾರತೀಯ ರೈಲ್ವೆ ಇಲಾಖೆಯ ಮೂಲಕ 400ಕ್ಕೂ ಹೆಚ್ಚು ಆಕ್ಸಿಜನ್ ಎಕ್ಸ್​​​ಪ್ರೆಸ್​ ಮೂಲಕ ರನ್ ಮಾಡಲಾಗಿದೆ. ಭಾರತ ಸರ್ಕಾರ 42 ಆಸ್ಪತ್ರೆಗಳಿಗೆ ಆಕ್ಸಿಜನ್ ಪ್ಲಾಂಟ್ಸ್ ನೀಡಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಮೂರನೇ ಅಲೆಯನ್ನು ದೃಷ್ಟಿ ಇಟ್ಟುಕೊಂಡು ಸಿದ್ದಪಡಿಸಲಾಗಿದೆ.‌ ಇದನ್ನು ‌ಕಿಮ್ಸ್ ಆಸ್ಪತ್ರೆ ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

Last Updated : Jun 12, 2021, 4:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.