ETV Bharat / state

ಪೌಷ್ಟಿಕತೆ ಕೊರತೆ: ರಾಜ್ಯದಲ್ಲಿ ಭಯ ಹುಟ್ಟಿಸುವಂತಿದೆ ತಾಯಿ ಮತ್ತು ಶಿಶು ಮರಣ ಪ್ರಮಾಣ - maternal and child mortality rates in state

ತಾಯಿ ಮತ್ತು ಶಿಶು ಮರಣ ಪ್ರಮಾಣ ನಿಯಂತ್ರಿಸಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸಹ ಪ್ರಯೋಜನವಾಗುತ್ತಿಲ್ಲ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಹೆಚ್ಚುತ್ತಿದೆ.

increase in maternal and child mortality rates
ಪೌಷ್ಟಿಕತೆ ಕೊರತೆ
author img

By

Published : Nov 14, 2022, 1:40 PM IST

ಹುಬ್ಬಳ್ಳಿ: ರಾಜ್ಯ ಸರ್ಕಾರ ಅಪೌಷ್ಟಿಕತೆ ಹಾಗೂ ಮಕ್ಕಳ ಮರಣ ತಪ್ಪಿಸಲು ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೂ ಸಹ ಉತ್ತರ ಕರ್ನಾಟಕದಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಅಂಕಿ ಅಂಶಗಳಿಂದ ಬಯಲಾಗಿದೆ.

ಹೌದು, ಆರೋಗ್ಯಕರ ಸಮಾಜ ಸೃಷ್ಟಿ ಮಾಡುವ ನಿಟ್ಟಿನಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಆರೋಗ್ಯಕ್ಕಾಗಿ ರಾಜ್ಯ ಸರ್ಕಾರ ನೂರಾರು ಕೋಟಿ ಅನುದಾನ ಖರ್ಚು ಮಾಡುತ್ತಿದೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ನಿಯಂತ್ರಿಸಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸಹ ಪ್ರಯೋಜನವಾಗುತ್ತಿಲ್ಲ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

ಈ ಭಾಗದ ಸಂಜೀವಿನಿ ಎಂದು ಕರೆಯಲ್ಪಡುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಕಿಮ್ಸ್) ದಾಖಲಾದ ಅಂಕಿ ಅಂಶಗಳು ಬಾಣಂತಿ ಮತ್ತು ಶಿಶುಗಳಿಗೆ ಸುರಕ್ಷತೆಯಿಲ್ಲ ಎಂಬುದನ್ನು ಸಾಬೀತು ಪಡಿಸಿದೆ.

ಇದನ್ನೂ ಓದಿ: ತಾಯಿ ಶಿಶು ಮರಣ ಪ್ರಮಾಣ ಇತರೆ ರಾಜ್ಯಗಳಿಂದ ಹೆಚ್ಚಿದ್ದು, ಅಗತ್ಯ ಕ್ರಮವಹಿಸಲು ಸೂಚನೆ: ಸಚಿವ ಮಾಧುಸ್ವಾಮಿ

ಕಿಮ್ಸ್ ಅಂಕಿ ಅಂಶಗಳ ಪ್ರಕಾರ, ಈ ವರ್ಷದ ಏಪ್ರಿಲ್​ನಿಂದ ಇಲ್ಲಿಯವರೆಗೆ 206 ಶಿಶುಗಳು ಹಾಗೂ 41 ತಾಯಂದಿರು ಮೃತಪಟ್ಟಿದ್ದಾರೆ. ಈ ಪೈಕಿ ಧಾರವಾಡ ಜಿಲ್ಲೆಯೊಂದರಲ್ಲೇ 17 ತಾಯಂದಿರು ಹಾಗೂ 122 ಶಿಶುಗಳು ಸಾವನ್ನಪ್ಪಿವೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಅಂದ್ರೆ, ಗದಗ, ಹಾವೇರಿ, ಕೊಪ್ಪಳ, ಕಾರವಾರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಂದ ರೆಫರ್ ಆದ ಕೇಸ್​ಗಳು ಸಹ ಈ ಅಂಕಿ ಅಂಶಗಳಲ್ಲಿ ಸೇರಿವೆ. ಸಾವಿನ ಪ್ರಮಾಣದಲ್ಲಿ ನಮ್ಮ ರಾಜ್ಯವು ಅಕ್ಕ-ಪಕ್ಕದ ಕೇರಳ , ಮಹಾರಾಷ್ಟ್ರ, ತಮಿಳುನಾಡನ್ನು ಸಹ ಹಿಂದೆ ಹಾಕಿದ್ದು, ವೈದ್ಯಕೀಯ ಲೋಕದಲ್ಲಿ ಕಳವಳ ಶುರುವಾಗಿದೆ.

ತಾಯಿ ಮತ್ತು ಶಿಶು ಮರಣದ ಕುರಿತು ಮಾಹಿತಿ ನೀಡಿದ ಕಿಮ್ಸ್ ನಿರ್ದೇಶಕರು

ಇದನ್ನೂ ಓದಿ: ಹಳ್ಳದಲ್ಲಿ ತೇಲಿಬಂದ 7 ಭ್ರೂಣಗಳು: ಹೌಹಾರಿದ ಬೆಳಗಾವಿ ಜನ!

ಇನ್ನೊಂದೆಡೆ, ಇಷ್ಟು ಪ್ರಮಾಣದ ಸಾವಿಗೆ ಗ್ರಾಮೀಣ ಭಾಗದ ಗರ್ಭಿಣಿಯರು ಮತ್ತು ಕುಟುಂಬಸ್ಥರ ನಿರ್ಲಕ್ಷ್ಯ, ಅನಕ್ಷರತೆ ಮತ್ತು ಮೂಢ ನಂಬಿಕೆಯೇ ಮೂಲ ಕಾರಣ. ಜೊತೆಗೆ ಅಪೌಷ್ಟಿಕ ಆಹಾರ ಪದ್ಧತಿ ಹಿನ್ನೆಲೆ ಬಿಪಿ, ಮೂರ್ಚೆರೋಗ, ಡೆಂಗ್ಯೂ ಜ್ವರ, ರಕ್ತದ ಕಣಗಳು ಕಡಿಮೆಯಾಗುತ್ತಿದ್ದು ಇದರಿಂದ ಸಹ ಶಿಶು ಮತ್ತು ತಾಯಂದಿರ ಸಾವಿನ ಪ್ರಮಾಣ ಜಾಸ್ತಿಯಾಗುತ್ತಿದೆ ಎನ್ನಲಾಗ್ತಿದೆ.

ಇದಲ್ಲದೇ, ಶಿಶುವಿಗೆ ತಾಯಿಯ ಎದೆ ಹಾಲು ಅಮೃತ. ಆದ್ರೆ, ಇತ್ತೀಚಿನ ದಿನಗಳಲ್ಲಿ ಎದೆ ಹಾಲು ಬಿಟ್ಟು ಬೇರೆ ಆಹಾರ ನೀಡುತ್ತಿರುವುದರಿಂದ ಸಹ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬಿರುತ್ತಿದೆ. ಹಾಗೂ ಹೆರಿಗೆ ಸಮಯದಲ್ಲಿ ಬೇರೆ ಬೇರೆ ಜಿಲ್ಲೆಗಳ ವೈದ್ಯರು ಚಿಕಿತ್ಸೆ ನೀಡಲು ಹೆದರಿ, ಕೆಲವು ಕೇಸ್​ಗಳನ್ನು ಕಿಮ್ಸ್​ಗೆ ರೆಫರ್​ ಮಾಡುತ್ತಿದ್ದಾರೆ. ಇದರಿಂದಾಗಿ ಮಾರ್ಗಮಧ್ಯದಲ್ಲಿ ಎಷ್ಟೋ‌ ಜನ ಮೃತಪಟ್ಟಿರುವ ಘಟನೆ ಸಹ ನಡೆದಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಗಂಭೀರವಾಗಿ ಯೋಚಿಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.