ಹುಬ್ಬಳ್ಳಿ: ಅಪಘಾತ ವಿಮೆಗೆ ಹಣ ಹೊಂದಿಸಲು ಸಾರಿಗೆ ಸಂಸ್ಥೆ ಈಗ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ರಾಜ್ಯದಲ್ಲಿ ಜನವರಿ 1 ರಿಂದಲೇ ಟಿಕೆಟ್ ದರದಲ್ಲಿ ಒಂದು ರೂಪಾಯಿ ಹೆಚ್ಚಿಸಲಾಗಿದೆ. ಕೆಎಸ್ಆರ್ಟಿಸಿ ಮಾದರಿಯಲ್ಲಿ ಎನ್ಡಬ್ಲ್ಯೂಕೆಆರ್ಟಿಸಿ ಕೂಡ ಟಿಕೆಟ್ ದರ ಏರಿಕೆ ಮಾಡಿದೆ.
ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ದರದಲ್ಲಿ ಒಂದು ರೂಪಾಯಿ ಹೆಚ್ಚಳವಾಗಿದೆ. ಜನವರಿ 1 ರಿಂದಲೇ ಟಿಕೆಟ್ ದರದಲ್ಲಿ ಒಂದು ರೂ. ಹೆಚ್ಚಳ ಮಾಡಲಾಗಿದೆ. 50 ರೂಪಾಯಿ ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ 1 ರೂಪಾಯಿ ಹೆಚ್ಚಿನ ದರ ಸಂಗ್ರಹ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚಿಗೆ ಪಡೆದ 1 ರೂಪಾಯಿಯನ್ನು ಅಪಘಾತ ವಿಮೆಗೆ ಬಳಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ. ಅಪಘಾತ ವಿಮೆಗೆ ಬಳಸಲು 1 ಲಕ್ಷದಿಂದ 10 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. 50 ರೂಪಾಯಿಯಿಂದ 99 ರೂಪಾಯಿವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1 ರೂಪಾಯಿಯನ್ನು ಹೆಚ್ಚವರಿಯಾಗಿ ಪಡೆದುಕೊಳ್ಳಲಾಗುತ್ತಿದೆ.
100 ರೂಪಾಯಿ ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 2 ರೂಪಾಯಿಯಂತೆ ಅಪಘಾತ ಪರಿಹಾರ ನಿಧಿಗಾಗಿ ಹಣ ಸಂಗ್ರಹ ಮಾಡಿಕೊಳ್ಳಲಾಗುತ್ತಿದೆ. ಅಪಘಾತ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಹಣ ಪಡೆದುಕೊಳ್ಳಲಾಗುತ್ತಿದೆ. ಆದರೆ, ಯಾವುದೇ ದರ ಪರಿಷ್ಕರಣೆಯಾಗಿಲ್ಲ. ಅಪಘಾತ ವಿಮೆ ಹಣ ಹೆಚ್ಚಾಗಿರುವ ಕಾರಣದಿಂದ ಈ ನಿಯಮ ಜಾರಿಗೆ ತರಲಾಗಿದೆ. ಇದು ಯಾವುದೇ ರೂಟಿಗೂ ಬದಲಾಗುವುದಿಲ್ಲ. ಎಲ್ಲ ರೂಟ್ಗಳಿಗೂ ಇದು ಅನ್ವಯವಾಗುತ್ತದೆ'' ಎಂದು ವಾಯುವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಂ. ಸ್ಪಷ್ಟಪಡಿಸಿದ್ದಾರೆ.
ಇನ್ನು ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್‌ಗೆ ಸಂಗ್ರಹವಾದ ಹಣ ವರ್ಗಾವಣೆಯಾಗಲಿದೆ. ಬಸ್‌ನಲ್ಲಿ ಪ್ರಯಾಣಿಸುವ ವೇಳೆ ದುರದೃಷ್ಟವಶಾತ್ ಪ್ರಯಾಣಿಕರು ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ದೊರೆಯಲಿದೆ. ಹೀಗಾಗಿ ಪ್ರಯಾಣಿಕರಿಂದ 1 ರೂಪಾಯಿ ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ. ಈ ಹಿಂದೆ 100 ರೂಪಾಯಿ ಮುಖಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 1 ರೂಪಾಯಿ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ಈಗ 50 ರೂಪಾಯಿಯಿಂದ ಆರಂಭಿಸಲಾಗಿದೆ. ಸಾರ್ವಜನಿಕರಲ್ಲಿ ದರ ಏರಿಕೆಯ ಗೊಂದಲದ ಬಗ್ಗೆಯೂ ನಿಗಮ ಮಾಹಿತಿ ನೀಡಲು ಮುಂದಾಗಿದೆ.
ಇದನ್ನೂ ಓದಿ: ನಾಳೆಯಿಂದ ಬಂಕ್ಗಳಲ್ಲಿ ಪೆಟ್ರೋಲ್ ಡೀಸೆಲ್ ದರಪಟ್ಟಿ ಕನ್ನಡದಲ್ಲಿ ಪ್ರಕಟ: ಹರ್ದೀಪ್ ಸಿಂಗ್ ಪುರಿ