ETV Bharat / state

20 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ: ಕೇಂದ್ರ ಸಚಿವ ಜೋಶಿ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ರಾಷ್ಟ್ರೀಯ ಧ್ವಜದ ಸಂಹಿತೆ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ- ರಾಹುಲ್ ಗಾಂಧಿ ಬರುವ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ- ಕೇಂದ್ರ ಸಚಿವ ಪ್ರಹ್ಲಾದ ಜೋಶಿ

independence-day-buy-a-flag-and-fly-it-at-house-on-from-13th-to-15th-august-says-union-minister-pralhad-joshi
20 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ: ಕೇಂದ್ರ ಸಚಿವ ಜೋಶಿ
author img

By

Published : Jul 30, 2022, 5:57 PM IST

ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಒಂದು ಧ್ವಜಕ್ಕೆ 20 ರೂ. ಕೊಟ್ಟು‌ ಸಾರ್ವಜನಿಕರು ಖರೀದಿ ಮಾಡಬೇಕು. ಆಗಸ್ಟ್ 13ರಿಂದ 15ರವರೆಗೆ ಧ್ವಜವನ್ನು ಮನೆಗಳ ಮೇಲೆ ಹಾರಿಸಬಹುದು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜಗಳು ದೊರೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಮಗೆ ಹತ್ತು ಕೋಟಿ ಧ್ವಜ ಬೇಕು. ಅದನ್ನು ಪೂರೈಕೆ ಮಾಡೋಕೆ ಆಗೋದಿಲ್ಲ. ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದರಿಂದ ಧ್ವಜದ ಸಂಹಿತೆಗೆ ತಿದ್ದುಪಡಿ ತರಲಾಗಿದೆ ಎಂದರು.

20 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ: ಕೇಂದ್ರ ಸಚಿವ ಜೋಶಿ

ರಾಷ್ಟ್ರೀಯ ಧ್ವಜದ ಸಂಹಿತೆ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ರಾಹುಲ್ ಗಾಂಧಿ ಬರುವ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ ಎಂದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ಕಾರಣಗಳನ್ನು ನೀಡಿ ಜನರಿಗೆ ಸಮಸ್ಯೆ ಉಂಟು ಮಾಡುವ ಕೆಲಸವನ್ನು ಆಗಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದನ್ನೂ ಓದಿ: 'ಬಿಎಸ್​ವೈಗೆ ಪಂಚಮಸಾಲಿಗಳ ಶಾಪ ತಟ್ಟಿದೆ: ಬೊಮ್ಮಾಯಿಯವರೇ ಮಾತು ತಪ್ಪಿದ್ರೆ ನಿಮ್ಗೂ ಸಂಕಷ್ಟ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.