ETV Bharat / state

ವಾಯವ್ಯ ಸಾರಿಗೆ ಸಂಸ್ಥೆ ನೌಕರರಿಗೆ ವೇತನ ನೀಡಿ.. ಹೆಚ್.ವಿ. ಅನಂತ ಸುಬ್ಬರಾವ್ ಆಗ್ರಹ

author img

By

Published : Oct 10, 2020, 8:04 PM IST

Updated : Oct 10, 2020, 8:57 PM IST

ಕೋವಿಡ್ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆ ನೌಕರರಿಗೆ ವೇತನ ನೀಡಿ, ಇಲ್ಲವಾದಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕೆಎಸ್​ಆರ್​ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಹೆಚ್.ವಿ.ಅನಂತ ಸುಬ್ಬರಾವ್ ಎಚ್ಚರಿಕೆ ನೀಡಿದ್ದಾರೆ.

hv anantha subbarao
ಹೆಚ್.ವಿ.ಅನಂತ ಸುಬ್ಬರಾವ್

ಹುಬ್ಬಳ್ಳಿ: ಕೋವಿಡ್ ಬಿಕ್ಕಟ್ಟಿನಿಂದಾಗಿ ಸಾರಿಗೆ ಇಲಾಖೆ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಸರ್ಕಾರ ಸಿಬ್ಬಂದಿ ಸಮಸ್ಯೆಗೆ ಸರಿಯಾಗಿ ಸ್ಪಂದಿಸಿಲ್ಲ ಅಂತಾ ಕೆಎಸ್​ಆರ್​ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಆರೋಪಿಸಿದ್ದಾರೆ.

ಹೆಚ್.ವಿ. ಅನಂತ ಸುಬ್ಬರಾವ್ ಆಗ್ರಹ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ವಾಯವ್ಯ ಸಾರಿಗೆ ನೌಕರರಿಗೆ ವೇತನ ಹಾಗೂ ಇನ್ನಿತರ ಸೌಲಭ್ಯ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ನಿವೃತ್ತ ನೌಕರರಿಗೆ ಬರುತ್ತಿದ್ದ ಪೆನ್ಷನ್​ನಲ್ಲಿ ಕೂಡ ಹಣ ಕಡಿತಗೊಳಿಸಲಾಗಿದೆ. ಸರ್ಕಾರ ನಮ್ಮೆಲ್ಲ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಅಂತಾ ಹೇಳಿದರು.

Last Updated : Oct 10, 2020, 8:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.