ಧಾರವಾಡ: ಹೊರರಾಜ್ಯಗಳಿಂದ ಆಗಮಿಸುವ ಜನರಿಗಾಗಿ ಆರೋಗ್ಯ ತಪಾಸಣೆ, ಕುಡಿಯುವ ನೀರು, ಆಹಾರ, ಶೌಚಾಲಯಗಳ ಮೂಲಭೂತ ಸೌಕರ್ಯಗಳನ್ನು ಕೃಷಿ ವಿ.ವಿ. ಆವರಣದಲ್ಲಿ ಕಲ್ಪಿಸಲಾಗಿದೆ.
ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತಿತರ ರಾಜ್ಯಗಳಿಂದ ಜನರು ಆಗಮಿಸುತ್ತಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ಹಂಚಾಟೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಎಸ್.ಎಂ.ಹೊನಕೇರಿ, ತಹಶೀಲ್ದಾರ ಸಂತೋಷ ಬಿರಾದಾರ ನೇತೃತ್ವದಲ್ಲಿ ತಪಾಸಣೆ ಮತ್ತ ನೋಂದಣಿ ಕಾರ್ಯಗಳು ನಡೆಯುತ್ತಿವೆ.
ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹಾಗೂ ಮತ್ತಿತರರು ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.