ಹುಬ್ಬಳ್ಳಿ: ಬೈಕ್ ಕಳ್ಳತನ ಹಾಗೂ ಅಂಗಡಿ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳ ಟೋಪಗಿ ವಿಜಯನನ್ನು ನಗರದ ಸರ್ಕ್ಯೂಟ್ ಹೌಸ್ ಬಳಿ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಅಂತರ್ ಜಿಲ್ಲಾ ಕಳ್ಳ ಉಪನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಧಾರವಾಡದ ವಿದ್ಯಾಗಿರಿ, ಹಳೇ ಹುಬ್ಬಳ್ಳಿ ಹಾಗೂ ಲೋಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.
ಬಂಧಿತ ಕಳ್ಳ ಟೋಪಗಿ ವಿಜಯ ಬಳಿಯಿದ್ದ ವಿವಿಧ ಕಂಪನಿಯ ಐದು ಬೈಕ್ ಹಾಗೂ ನಗದು ಸೇರಿಸಿ ಒಟ್ಟು 2,35,200 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಆಯುಕ್ತ ಲಾಬೂರಾಮ್ ಅವರ ಮಾರ್ಗದರ್ಶನದಲ್ಲಿ, ಉಪನಗರ ಪೊಲೀಸ್ ಠಾಣೆಯ ಪಿಎಸ್ಐ ಎಸ್.ಕೆ.ಹೊಳೆನ್ನವರ, ಪಿಎಸ್ಐ ಸೀತಾರಾಮ, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.