ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಇಲ್ಲಿನ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇಶ್ವಾಪುರದ ಜನತಾ ಕಾಲೋನಿಯಲ್ಲಿ ಸೋಮವಾರ ರಾತ್ರಿ ಮೊಬೈಲ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿರುವ ಪೊಲೀಸರು, ಆಟೋ ರಿಕ್ಷಾ ಚಾಲಕರಾದ ರೈಲ್ವೆ ಕ್ವಾರ್ಟರ್ಸ್ ಕಾಲೋನಿಯ ಶಿವರಾಮಕೃಷ್ಣ ನಾಂಚರಯ್ಯ, ಗಾಂಧಿವಾಡ ಸ್ಲಂನ ರಾಜೇಂದ್ರ ಅಕ್ಕಿದಾಸರಿ ಮತ್ತು ಚಾಲುಕ್ಯ ನಗರದ ಪೇಂಟರ್ ರಾಜರಾವ ಪಾಪತಿನಿ ಎಂಬುವರನ್ನು ಬಂಧಿಸಿದ್ದಾರೆ.
ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 1.34 ಲಕ್ಷ ರೂ. ನಗದು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.