ಹುಬ್ಬಳ್ಳಿ: ಆರ್ಟಿಒ ಕಚೇರಿಯಲ್ಲಿ ಏಜೆಂಟ್ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ನೇರವಾಗಿ ಸರ್ಕಾರಿ ಸೇವೆಗಳನ್ನು ಪಡೆಯಲು ಕಷ್ಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್, ಗಬ್ಬೂರು ಆರ್ಟಿಒ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರ್ಟಿಒ ಅಧಿಕಾರಿಗಳು ಹಣದ ಆಸೆಗೆ ಬಲಿಯಾಗದೇ ಸಾರ್ವಜನಿಕರಿಗೆ ಶೀಘ್ರವಾಗಿ ಸೇವೆಗಳನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಆರ್ಟಿಒ ಕಚೇರಿ ಆವರಣದಲ್ಲಿದ್ದ ಏಜೆಂಟ್ ಬಳಿಯಿದ್ದ ದಾಖಲೆಗಳನ್ನೂ ಪರಿಶೀಲನೆ ಮಾಡಿದ್ರು. ತದನಂತರ ಸಾರ್ವಜನಿಕರಿಗೆ ಆರ್ಟಿಒ ಕಚೇರಿಯ ಸೇವೆಗಳ ಮಾಹಿತಿ ನೀಡಿ, ಉಪಯೋಗ ಪಡೆಯುವಂತೆ ತಿಳಿಸಿದರು.