ಹುಬ್ಬಳ್ಳಿ: ಸಚಿವ ಸ್ಥಾನಕ್ಕೆ ನಾನು ಲಾಬಿ ಮಾಡುವುದಿಲ್ಲ. ಸಂಪುಟದಲ್ಲಿ ಸ್ಥಾನ ಸಿಗುವುದು ಬಿಡುವುದು ಪಕ್ಷದ ತೀರ್ಮಾನವಾಗಿದೆ ಎಂದು ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.
ನಗರದಲ್ಲಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನಕ್ಕೆ ನಾನು ಯಾವುದೇ ರೀತಿ ಲಾಬಿ ಮಾಡುವುದಿಲ್ಲ. ಸಂಪುಟದಲ್ಲಿ ಸ್ಥಾನ ಸಿಗುವುದು ಬಿಡುವುದು ಪಕ್ಷ ತೀರ್ಮಾನ ಮಾಡಲಿದೆ ಎಂದರು.
ಈಗಾಗಲೇ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಲಾಗುತ್ತಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿ.ಎಸ್ ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.