ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ವಿನಯ್ ಹೊರ ಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.
ವಿನಯ್ ಕುಲಕರ್ಣಿ ಮೇಲೆ ಸಾಕ್ಷಿ ನಾಶ ಕುರಿತ ಪ್ರಕರಣವೊಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಿರಸ್ಕಾರಗೊಂಡಿತ್ತು. ಹೀಗಾಗಿ, ಜಾಮೀನಿಗಾಗಿ ಬೆಂಗಳೂರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ವಿನಯ್‌ಗೆ ಸದ್ಯಕ್ಕೆ ರಿಲೀಫ್ ಸಿಗುವ ಸಾಧ್ಯತೆ ಕಡಿಮೆ.
ಪಟಾಕಿ ಸಿಡಿಸಿ ಕಾರ್ಯಕರ್ತರಿಂದ ಸಂಭ್ರಮ : ಇನ್ನು ಸುಪ್ರೀಂಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕಲ್ಯಾಣನಗರದಲ್ಲಿರುವ ವಿನಯ್ ಮನೆಗೆ ಕಾರ್ಯಕರ್ತರು ದೌಡಾಯಿಸುತ್ತಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಓದಿ: ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು