ETV Bharat / state

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಜಗದೀಶ್ ಶೆಟ್ಟರ್ - ಹುಬ್ಬಳ್ಳಿಯ ಈದ್ಗಾ ಮೈದಾನ

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್​ ಶೆಟ್ಟರ್​, ದೆಹಲಿಯಲ್ಲಿ ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯೂ ನಡೆದಿಲ್ಲ ಎಂದರು.

Jagadeesh Shettar speak about the CM change
ಮಾಜಿ ಸಿಎಂ ಜಗದೀಶ್ ಶೆಟ್ಟರ್
author img

By

Published : Aug 12, 2022, 3:52 PM IST

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ರಾಷ್ಟ್ರೀಯ ನಾಯಕರಾಗಲಿ, ಪಕ್ಷದ ನಾಯಕರಾಗಲಿ ಯಾರೂ ಕೂಡ ಈ ವಿಷಯ ಪ್ರಸ್ತಾಪಿಸಿಲ್ಲ. ಹಾಗಾಗಿ, ಸಿಎಂ‌ ಕುರ್ಚಿ ಖಾಲಿ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ದೆಹಲಿಯಲ್ಲಿ ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ವೈಷ್ಣೋದೇವಿ ದರ್ಶನಕ್ಕೆ ಹೋದಾಗ ದೆಹಲಿಗೆ ಹೋಗಿದ್ದೆ ಅಷ್ಟೇ. ಅಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾನೇನು ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಭೇಟಿಯಾದೆನೇ? ಎಂದರು.

ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ, ಎಲ್ಲರ ಕಾಲದಲ್ಲಿಯೂ ಕೂಡ ಕಾನೂನು ಸುವ್ಯವಸ್ಥೆ ಹದಗೆಟ್ಟಿರುತ್ತದೆ ಎಂದರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರವಾಗಿ ಮಾತನಾಡಿ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಹು-ಧಾ ಮಹಾನಗರ ಪಾಲಿಕೆ ಆಯುಕ್ತರು ನಿರ್ಧಾರ ಕೈಗೊಳ್ಳುವರು ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ಬದಲಾವಣೆ ಹೇಳಿಕೆ ನೀಡಿದ ಮಾಜಿ ಶಾಸಕರಿಗೆ ಸಿಎಂ, ಕಟೀಲ್ ವಾರ್ನಿಂಗ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.