ಧಾರವಾಡ: ನಗರದ ಡಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ನೂತನ ಕೋವಿಡ್ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಚಾಲನೆ ನೀಡಿದರು.
ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಕೋವಿಡ್ ಪ್ರಯೋಗಾಲಯನ್ನು ಸ್ಥಾಪನೆ ಮಾಡಲಾಗಿದೆ. ಇಂದು ಸಚಿವ ಜಗದೀಶ್ ಶೆಟ್ಟರ್ ಅದಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ಪ್ರಯೋಗಾಲಯದಲ್ಲಿ ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ದಿನಕ್ಕೆ 100 ಶಂಕಿತರ ಪರೀಕ್ಷೆ ಮಾಡಬಹುದಾಗಿದೆ. ಇದು ಜಿಲ್ಲೆಯಲ್ಲಿ ಎರಡನೇ ಪ್ರಯೋಗಾಲಯವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.