ETV Bharat / state

ಸಿದ್ದರಾಮಯ್ಯ ವೀರ ಸಾವರ್ಕರ್‌ರನ್ನು ಕೆಟ್ಟದಾಗಿ ಬಿಂಬಿಸ್ತಿದ್ದಾರೆ: ಜಗದೀಶ್ ಶೆಟ್ಟರ್ - ಈಟಿವಿ ಭಾರತ್ ಕನ್ನಡ ಸುದ್ದಿ

ವೀರ ಸಾವರ್ಕರ್ ಕ್ರಾಂತಿಕಾರಿ ಹೋರಾಟ ಮಾಡಿದ್ದಕ್ಕೆ ಅವರಿಗೆ ಬ್ರಿಟಿಷರು ಶಿಕ್ಷೆ ನೀಡಿದ್ದರು. ಅವರು ಸ್ವತಂತ್ರಕ್ಕಾಗಿ ಹೋರಾಟ ಮಾಡಿದ್ದಾರೆ. ಅದರ ಬಗ್ಗೆ ಸಿದ್ದರಾಮಯ್ಯ ಸರಿಯಾಗಿ ತಿಳಿದುಕೊಳ್ಳಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್
author img

By

Published : Aug 19, 2022, 7:01 PM IST

Updated : Aug 19, 2022, 10:34 PM IST

ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಅಲ್ಪ‌ಸಂಖ್ಯಾತರನ್ನು ಓಲೈಸಲು ವೀರ ಸಾವರ್ಕರ್ ಅವರನ್ನು ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ. ಯಾವುದೋ ಒಂದು ಧರ್ಮ, ವರ್ಗದ ಬಗ್ಗೆ ಇರುವ ಅತಿಯಾದ ಪ್ರೀತಿಯಿಂದಲೇ ವೀರ ಸಾವರ್ಕರ್ ಬಗ್ಗೆ ಈ ರೀತಿ ಮಾತನಾಡುವುದು ಶುರುವಾಗಿದೆ. ಅವರು ಸಾವರ್ಕರ್ ಅವರ ಇತಿಹಾಸವನ್ನು ತಿಳಿದುಕೊಳ್ಳಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು

ನಗರದಲ್ಲಿಂದು ಮಾತನಾಡಿದ ಅವರು, ವೀರ ಸಾವರ್ಕರ್ ಕ್ರಾಂತಿಕಾರಿ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಶಿಕ್ಷೆ ನೀಡಿದ್ದರು. ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅದರ ಬಗ್ಗೆ ಸಿದ್ಧರಾಮಯ್ಯ ಸರಿಯಾಗಿ ತಿಳಿದುಕೊಳ್ಳಲಿ. ಸಮಾಜದಲ್ಲಿ ದ್ವೇಷದ ವಾತಾವರಣ ನಿರ್ಮಾಣ ಮಾಡುವಂತಹ ಕೆಲಸವನ್ನು ನಿಲ್ಲಿಸಬೇಕು ಎಂದರು.

ಅವರ ಸಂಸ್ಕೃತಿಯನ್ನು ತೋರಿಸುತ್ತದೆ: ಸಿದ್ದರಾಮಯ್ಯ ಕಾರಿನ ಮೊಟ್ಟೆ ಒಡೆದಿರುವುದನ್ನು ನಾನೂ ಸಹ ಖಂಡಿಸುತ್ತೇನೆ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ಮೊಟ್ಟೆ ಎಸೆದವರ ಬಗ್ಗೆ ಸರ್ಕಾರ ನೋಡಿಕೊಳ್ಳುತ್ತದೆ. ಐದು ವರ್ಷ ಸಿಎಂ‌ ಆದಂತವರು ಯಾವ ರೀತಿ ನಡೆದುಕೊಳ್ಳಬೇಕು ಅನ್ನೋದನ್ನು ತಿಳಿದುಕೊಳ್ಳಲಿ ಎಂದು ಪ್ರತಿಕ್ರಿಯಿಸಿದರು.

ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಮುಂದಿನ ಸರ್ಕಾರ ನಮ್ಮದೇ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ, ಸಿದ್ದರಾಮಯ್ಯ, ಡಿಕೆಶಿ ಕನಸು ಕಾಣುತ್ತಿದ್ದಾರೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ‌ ಭೀತಿಯಲ್ಲಿದೆ. ಪ್ರತಿಯೊಂದು ರಾಜ್ಯದಲ್ಲಿಯೂ ಅವರು ಅಧಿಕಾರ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ಕೂಡ ಅವರು ತಮ್ಮ ಅಸ್ತಿತ್ವ ಕಳೆದುಕೊಂಡಿದ್ದಾರೆ. ಹೀಗಾಗಿ, ಹತಾಶೆಯಿಂದ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅತ್ಯಂತ ಶೋಚನೀಯ ಸ್ಥಿತಿ ಅನುಭವಿಸಲಿದೆ. ಅವರು ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. 2023ರಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಇದನ್ನೂ ಓದಿ: ಬಿಜೆಪಿ ಮತ್ತು ‌ಕಾಂಗ್ರೆಸ್ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿವೆ.. ಎಂಎಲ್​​ಸಿ ಶರವಣ

Last Updated : Aug 19, 2022, 10:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.