ETV Bharat / state

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ: ಪಾಲಿಕೆಯಿಂದಲೇ ಸೂಕ್ತ ನಿರ್ಧಾರ ಎಂದ ಶೆಟ್ಟರ್ - jagadish shettar reaction about tipu jayanti

ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಪಾಲಿಕೆಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

jagadish shettar
ಮಾಜಿ ಸಿಎಂ ಜಗದೀಶ್ ಶೆಟ್ಟರ್
author img

By

Published : Nov 7, 2022, 2:29 PM IST

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವಂತೆ ಹಲವಾರು ಸಂಘಟನೆಗಳು ಪಾಲಿಕೆಗೆ ಮನವಿ ನೀಡಿವೆ. ಈ ಕುರಿತು ಪಾಲಿಕೆಯೇ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಐಸಿಸಿ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ದೊಡ್ಡದೊಂದು ಕಾರ್ಯಕ್ರಮ ಮಾಡಿದ್ದಾರೆ. ಇದರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಎಫೆಕ್ಟ್​ ಆಗುವುದಿಲ್ಲ. ಅಷ್ಟೇ ಅಲ್ಲದೇ, ರಾಹುಲ್ ಗಾಂಧಿ ಕೂಡ ರಸ್ತೆಗಿಳಿದು ಭಾರತ್ ಜೋಡೋ ಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಿಂದ ಬಿಜೆಪಿಗೆ ನಷ್ಟವಿಲ್ಲ ಎಂದರು.

ಇದನ್ನೂ ಓದಿ:ಟಿಪ್ಪು ಫ್ಲೆಕ್ಸ್ ಹರಿದ ಪ್ರಕರಣ.. ಪುನೀತ್​ ಕೆರೆಹಳ್ಳಿ ಸೇರಿ ಮೂವರು ಆರೋಪಿಗಳು ಪೊಲೀಸ್​ ವಶಕ್ಕೆ

ಈಗಾಗಲೇ ಕಾಂಗ್ರೆಸ್ ಮುಳುಗುತ್ತಿದೆ. ಯಾರೇ ಅಧ್ಯಕ್ಷರಾಗಿ ನೇಮಕವಾಗಲಿ ರಾಷ್ಟ್ರ ರಾಜಕೀಯದಲ್ಲಿ ಹಾಗೂ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲ್ಲ. ಬಿಜೆಪಿ ರಾಷ್ಟ್ರದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.