ETV Bharat / state

ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಗದೀಶ್ ಶೆಟ್ಟರ್ ಸಮರ್ಥನೆ

ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರು ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್​ ಶೆಟ್ಟರ್
ಮಾಜಿ ಸಿಎಂ ಜಗದೀಶ್​ ಶೆಟ್ಟರ್
author img

By ETV Bharat Karnataka Team

Published : Dec 6, 2023, 3:27 PM IST

Updated : Dec 6, 2023, 5:03 PM IST

ಮಾಜಿ ಸಿಎಂ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ : ಮುಸ್ಲಿಂರ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲ. ನನಗೆ ಅರ್ಥನೇ ಆಗ್ತಿಲ್ಲ. ಅವರು ಹೇಳಿದ ಹೇಳಿಕೆಯನ್ನು ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ ಹಿತರಕ್ಷಣೆ ಮಾಡುತ್ತೀನಿ ಅಂತ ಹೇಳೋದು ಸಹಜ. ಇಲ್ಲ ನಿಮ್ಮ ಹಿತ ರಕ್ಷಣೆ ಮಾಡುವುದಿಲ್ಲ ಅಂತ ಹೇಳ್ತಾರೇನು? ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ. ಅದನ್ನು ಬಿಟ್ಟು ಬಿಡಿ, ಸಿದ್ದರಾಮಯ್ಯ ಅವರೇ ಸಮರ್ಥರಿದ್ದಾರೆ. ಅವರೇ ಅದರಲ್ಲಿ ಉತ್ತರ ಕೊಡ್ತಾರೆ ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆ ಆಗಲೇಬೇಕು. ವಿರೋಧ ಪಕ್ಷದವರ ಮೇಲೆ ಕೂಡ ಸಾಕಷ್ಟು ಜವಾಬ್ದಾರಿ ಇದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ಧ್ವನಿ ಎತ್ತಿದರೆ ಖಂಡಿತವಾಗಿ ಚರ್ಚೆ ಆಗುತ್ತದೆ. ಉತ್ತರ ಕರ್ನಾಟಕ ಅಭಿವೃದ್ಧಿ ಅಂತ ಬಂದರೆ ಮಹದಾಯಿ, ಕಳಸ ಬಂಡೂರಿ ಸೇರಿ ಎಲ್ಲ ವಿಷಯಗಳು ಒಳಗೊಳ್ಳುತ್ತವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ನಂತರ ಯತ್ನಾಳ್ ಅಸಮಾಧಾನ ವಿಚಾರ, ಅವರವರೇ ಅದರ ಬಗ್ಗೆ ಮಾತನಾಡಬೇಕು. ನಾನು ಅದರ ಬಗ್ಗೆ ಏನು ಮಾತನಾಡಲಿ? ನಾನು ಹಿಂದೆನೇ ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೆ ಹೇಳುವುದರಲ್ಲಿ ಅರ್ಥವಿಲ್ಲ ಎಂದರು.

ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ : ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಅವರು ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್​ನಲ್ಲಿ ಮೀಸಲಿಡುವುದಾಗಿ ಸಿಎಂ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.

ಮೀಸಲು ನೀಡಿದ್ದರಲ್ಲಿ ಏನು ತಪ್ಪಿದೆ? ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೇನೆ. ಅದನ್ನು ಬಿಟ್ಟು ಬರೆದರೆ ಏನು ಮಾಡುವುದು?. ಅದು ತುಷ್ಟೀಕರಣನಾ?. ಅದಕ್ಕೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ ಅಷ್ಟೇ. ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

Last Updated : Dec 6, 2023, 5:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.