ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಐದು ವರ್ಷ ಮುಖ್ಯ ಮಂತ್ರಿಯಾದವರು ಹಾಗೂ ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರಿಗೆ ಹೇಗಿರಬೇಕು ಎಂದು ಹೇಳುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಜವಾಬ್ದಾರಿ ಸ್ಥಾನ ನಿಭಾಯಿಸಿದ ಸಿದ್ದರಾಮಯ್ಯ ಈ ರೀತಿ ಮಾತನಾಡುವುದ ಸರಿಯಲ್ಲ.
ಪ್ರಧಾನಿ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವಂತಹದಲ್ಲ. ಅವರಿಗೆ ಅಪಮಾನ ಮಾಡುವುದು ದೇಶದ ಜನರಿಗೆ ಅಪಮಾನ ಮಾಡಿದ ಹಾಗೆ ಎಂದು ಹೇಳಿದರು.
ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ಕೆಲವು ಕಡೆ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಇದರಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಸೂಕ್ತವಾಗಿ ನಿಭಾಯಿಸುತ್ತದೆ ಎಂದರು.
ಇದನ್ನೂ ಓದಿ: ಹಿಜಾಬ್ ವಿವಾದ ಪ್ರಕರಣ.. ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ?