ETV Bharat / state

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಶಾಸಕ ಜಗದೀಶ್​ ಶೆಟ್ಟರ್ ವಿಶ್ವಾಸ

ಶೆಟ್ಟರ್ ಅವರು ಸಿಎಂ ಅವರಿಂದ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್​, ಮೊನ್ನೆ ನಾನು ಅವರು ಬೆಳಗಾವಿಯಲ್ಲಿ ಒಂದೇ ವೇದಿಕೆಯಲ್ಲಿದ್ದೆವು. ಆದರೆ, ನಿನ್ನೆ ಬೇರೆ ಕಾರ್ಯದ‌ ನಿಮಿತ್ತವಾಗಿ ಕಾರ್ಯಕ್ರಮಕ್ಕೆ ಹೋಗಿಲ್ಲ, ಇದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ..

jagadish shetter reaction on by election
ಜಗದೀಶ್​ ಶೆಟ್ಟರ್ ವಿಶ್ವಾಸ
author img

By

Published : Sep 28, 2021, 6:55 PM IST

ಹುಬ್ಬಳ್ಳಿ : ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅಲ್ಲದೇ ಈಗಾಗಲೇ ಭಾರತೀಯ ಜನತಾ ಪಕ್ಷ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದೆ. ಉಪ ಚುನಾವಣೆಯಲ್ಲಿ ಕೂಡ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲುತ್ತೆ.. ಶಾಸಕ ಜಗದೀಶ್​ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿರುವುದು..

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪಚುನಾವಣೆಗೆ ನಾವು ಯಾವಾಗಿನಿಂದಲೂ ಸಿದ್ಧತೆಯಲ್ಲಿದ್ದೇವೆ. ದಾವಣಗೆರೆ ಕೋರ್ ಕಮಿಟಿಯಲ್ಲಿಯೂ ಕೂಡ ಇದರ ಬಗ್ಗೆ ಚರ್ಚೆಯಾಗಿದೆ. ಈವರೆಗೂ ಅಭ್ಯರ್ಥಿ ಫೈನಲ್ ಆಗಿಲ್ಲ. ದಾವಣಗೆರೆಯಲ್ಲಿಯೂ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿಲ್ಲ. ಕೋರ್ ಕಮಿಟಿಯಲ್ಲಿ ಉಸ್ತುವಾರಿ ಬಗ್ಗೆ ಚರ್ಚೆಯಾಗಿದೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿಯವರ ಸಾಮೂಹಿಕ ನಾಯಕತ್ವದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೌದು.. ನಾವೆಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರ ಹೇಳಿಕೆಗೆ ಮಾಜಿ ಸಿಎಂ ಸಮ್ಮತಿ ಸೂಚಿಸಿದರು.

ಶೆಟ್ಟರ್ ಅವರು ಸಿಎಂ ಅವರಿಂದ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್​, ಮೊನ್ನೆ ನಾನು ಅವರು ಬೆಳಗಾವಿಯಲ್ಲಿ ಒಂದೇ ವೇದಿಕೆಯಲ್ಲಿದ್ದೆವು. ಆದರೆ, ನಿನ್ನೆ ಬೇರೆ ಕಾರ್ಯದ‌ ನಿಮಿತ್ತವಾಗಿ ಕಾರ್ಯಕ್ರಮಕ್ಕೆ ಹೋಗಿಲ್ಲ, ಇದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಇದನ್ನೂ ಓದಿ:ಸಿಂದಗಿ ವಿಧಾನಸಭಾ ಉಪಚುನಾವಣೆ ಘೋಷಣೆ : ಅಭ್ಯರ್ಥಿಗಳ ಆಯ್ಕೆಗೆ ಭರ್ಜರಿ ಕಸರತ್ತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.