ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಪೌರತ್ವ ತಿದ್ದುಪಡಿ ಕಾಯ್ಕೆ ವಿಚಾರದಲ್ಲಿ ರಾಜಕೀಯ ಮಾಡುವ ಮೂಲಕ ಅಲ್ಪಸಂಖ್ಯಾತರರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಜಗದೀಶ ಶೆಟ್ಟರ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 18ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಜನರಲ್ಲಿರುವ ತಪ್ಪು ಕಲ್ಪನೆ ಹೋಗಲಾಡಿಸಲಿದ್ದಾರೆ. ಅಂದು ಸಂಜೆ 4ಗಂಟೆಗೆ ನಗರದ ನೆಹರು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಮೇಲೆ ಆರೋಪಿಸಲು ಯಾವುದೇ ವಿಷಯಗಳಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಹುಟ್ಟು ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದರು. ಕಾಂಗ್ರೆಸ್ ಪಕ್ಷದ ಕುರಿತು ಜನಾದೇಶ ಹೊರಬಿದ್ದಿದೆ. ಜನರೇ ಕಾಂಗ್ರೆಸ್ ಪಕ್ಷವನ್ನು ಗೋಬ್ಯಾಕ್ ಮಾಡಿದ್ದಾರೆ ಎಂದರು.