ಹುಬ್ಬಳ್ಳಿ: ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖಾಸಗಿ ವಾಹಿನಿ ಕ್ಯಾಮೆರಾಮನ್ ಸುನೀಲ್ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ.
ಭೇಟಿ ವೇಳೆ ಸುನೀಲ್ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಅಲ್ಲದೆ ಸುನೀಲ್ ಅವರ ಸಾವು ತುಂಬಾ ನೋವನ್ನುಂಟು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿ ಸಾಂತ್ವನ ಹೇಳಿ ತೆರಳಿದರು.