ಹುಬ್ಬಳ್ಳಿ: ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರದಿಂದ ಅನಗತ್ಯವಾಗಿ ಕ್ಯಾತೆ ತೆಗೆಯಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಬೆಳಗಾವಿ ಗಡಿ ವಿವಾದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಮಹಾರಾಷ್ಟ್ರದವರೇ ಮೊದಲು ಸುಪ್ರೀಂಕೋರ್ಟ್ಗೆ ಹೋಗಿದ್ದರು. ವಿವಾದ ಕೋರ್ಟ್ನಲ್ಲಿ ಇತ್ಯರ್ಥವಾಗಬೇಕಾಗಿದೆ. ಆದರೆ, ಅದಕ್ಕೂ ಮುನ್ನವೇ ಜಗಳ ಮಾಡಿಕೊಂಡು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಂಇಎಸ್ ನವರನ್ನ ಮುಂದೆ ಬಿಟ್ಟು ರಾಜಕೀಯ ಉದ್ದೇಶಕ್ಕೆ ಗಡಿ ವಿವಾದ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಇದು ಸರಿಯಲ್ಲ ಎಂದರು. ಮಹಾಜನ್ ವರದಿಯೇ ಅಂತಿಮ ಎಂದು ಮಹಾರಾಷ್ಟ್ರದವರೇ ಒಪ್ಪಿಕೊಂಡಿದ್ದಾರೆ. ಆದರೆ, ಈಗ ಯಾಕೆ ತಕಾರರು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕ ಬಸ್ಗಳಿಗೆ ಎಂಇಎಸ್ ಕಾರ್ಯಕರ್ತರು ಕಲ್ಲು ಎಸೆದು ಗಲಾಟೆ ಮಾಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಜಗದೀಶ ಶೆಟ್ಟರ್ ಹೇಳಿದರು.
ಇದನ್ನೂ ಓದಿ:ಗಡಿ ವಿವಾದದ ಬಗ್ಗೆ ಸಂಜೆ ಅಮಿತ್ ಶಾ ಸಭೆ: ರಾಜ್ಯದ ನಿಲುವು ಸ್ಪಷ್ಟಪಡಿಸಲಿದ್ದಾರಾ ಬೊಮ್ಮಾಯಿ ?