ETV Bharat / state

ಪ್ರತಿಷ್ಠಿತ ಕಂಪನಿಗಳಿಂದ‌ 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ: ಸಚಿವ ಶೆಟ್ಟರ್​​ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್

ಇನ್ವೆಸ್ಟ್​ ಕರ್ನಾಟಕ ಸಮ್ಮೇಳನದಲ್ಲಾದ ಒಡಂಬಡಿಕೆಯಂತೆ ಧಾರವಾಡ ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿಗಳು 6 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲಿವೆ. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ. ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನವನ್ನು ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ವೇಳೆ ಅವರು ಈ ವಿಷಯ ತಿಳಿಸಿದರು.

jagdish shettar visits hubli and check the smart city work
ಪ್ರತಿಷ್ಠಿತ ಕಂಪನಿಗಳಿಂದ‌ 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ: ಸಚಿವ ಶೆಟ್ಟರ್​​
author img

By

Published : Nov 25, 2020, 7:29 AM IST

Updated : Nov 25, 2020, 7:36 AM IST

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಮಾತನಾಡಿದರು. ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್​​​ಎಂಜಿಸಿ ಸೇರಿದಂತೆ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗವನ್ನರಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು.

ಕಾಂಗ್ರೆಸ್​ ಹಿರಿಯ ನಾಯಕ ಅಹ್ಮದ್​ ಪಟೇಲ್​ ವಿಧಿವಶ

ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ, ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ-ಧಾರವಾಡ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.

3 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ: ವಾರ್ಡ್ ನಂ. 33 ರ ಮಯೂರಿ ಎಸ್ಟೇಟ್​​ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಇಂದಿರಾ ನಗರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು. ಒಟ್ಟು 3 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದರು.

jagdish shettar visits hubli and check the smart city work
3 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

ಸ್ಮಾರ್ಟ್ ಸಿಟಿ ಕಾಮಗಾರಿ ಪರೀಶಿಲನೆ:

ತೋಳನಕೆರೆಗೆ ಭೇಟಿ ನೀಡಿದ ಸಚಿವರು, 15.57 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.

ಮಕ್ಕಳು ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಉದ್ಯಾನವನಗಳನ್ನು ನಿರ್ಮಿಸಿ, ಗುಣಮಟ್ಟದ ಪ್ಲೇಯರ್ಸ್ ಅಳವಡಿಸಬೇಕು. ಕೆರೆಯ ನೈಸರ್ಗಿಕ ಪರಿಸರ ಕಾಪಾಡಿ, ವಲಸೆ ಹಕ್ಕಿಗಳ ಆವಾಸ ಸ್ಥಾನ ರಕ್ಷಣೆ ಆಗಬೇಕು. ಉದ್ಯಾನವನ ಅತಿಕ್ರಮಣ ಹಾಗೂ ಅನಧಿಕೃತ ಪ್ರವೇಶ ಮಾಡದಂತೆ ಸುತ್ತಲೂ ಎತ್ತರದ ಕಾಂಪೌಂಡ್ ನಿರ್ಮಿಸಬೇಕು. ಯಾವುದೇ ಅನೈತಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.

ತೋಳನಕೆರೆಗೆ ಭೇಟಿ, ಪರಿಶೀಲನೆ

ಈ ಸಂದರ್ಭದಲ್ಲಿ ರಾಮಲಿಂಗೇಶ್ವರ ನಗರ ವಿಮಾನ ನಿಲ್ದಾಣದ ಹಿಂಭಾಗದ ಪ್ರದೇಶದಿಂದ ಆಗಮಿಸುವ ಚರಂಡಿ ನೀರು ನೇರವಾಗಿ ಕೆರೆಗೆ ಸೇರುವುದನ್ನು ಗಮನಿಸಿದ ಸಚಿವರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೆರೆಯನ್ನು ಅಭಿವೃದ್ಧಿ ಪಡಿಸಿದರೂ ಕೂಡ ಚರಂಡಿ ನೀರು ಕೆರೆಗೆ ಸೇರುತ್ತಿದೆ ಎಂದರೆ ಏನು ಅರ್ಥ? ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ಒಳಚರಂಡಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಮನ್ವಯದಿಂದ ಕಾರ್ಯ ನಡೆಸಬೇಕು. ಒಂದು ತಿಂಗಳ ಒಳಗಾಗಿ ಇದನ್ನು ಸರಿಪಡಿಸಬೇಕು. ಮುಂದಿನ ಭೇಟಿಯ ವೇಳೆ ಇದನ್ನು ಮತ್ತೊಮ್ಮೆ ಗಮನಿಸಿತ್ತೇನೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ಸಂಗೀತ ಕಾರಂಜಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿ, ಕೊಳಚೆ ನೀರು ಶುದ್ಧೀಕರಣ ಘಟಕಗಳನ್ನು ವೀಕ್ಷಿಸಿದರು.

Last Updated : Nov 25, 2020, 7:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.