ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ಕೇಂದ್ರ ಸರ್ಕಾರ ಜಾರಿ ಮಾಡಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಮಾ. 22ರಂದು ಭಾನುವಾರ ಹುಬ್ಬಳ್ಳಿ-ಧಾರವಾಡ ಮಧ್ಯದ ಬಿಆರ್ಟಿಎಸ್ ಬಸ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಜನತಾ ಕರ್ಫ್ಯೂ ಹಿನ್ನೆಲೆ ಚಿಗರಿ ಬಸ್ ಸಂಚಾರದ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಗರ ಹಾಗೂ ಉಪನಗರ ಬಸ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.