ಧಾರವಾಡ: ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ಭಾವಚಿತ್ರವನ್ನು ದಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಶಾಸಕ ಕಂಪ್ಲಿ ಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಠಾಕ್ರೆ ವಿರುದ್ಧ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದು, ಕನ್ನಡದ ಒಂದಿಂಚು ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಎಚ್ಚರಿಸಿದರು.