ETV Bharat / state

ಹುಬ್ಬಳ್ಳಿ: ಹಥ್ರಾಸ್​ ಅತ್ಯಾಚಾರ, ಕೊಲೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ - Ambedkar Circle

ಹಥ್ರಾಸ್​ನಲ್ಲಿ ನಡೆದ 19 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು.

jay-karnataka-organization-protests
ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ
author img

By

Published : Oct 9, 2020, 5:50 PM IST

ಹುಬ್ಬಳ್ಳಿ: ಹಥ್ರಾಸ್​​​‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಘೋಷಣೆ ಕೂಗಿದರು.

ಸಂತ್ರಸ್ತೆಯ ಕುಟುಂಬಸ್ಥರಿಗೂ ತಿಳಿಸದೇ ಅಂತ್ಯಕ್ರಿಯೆ ನಡೆಸಿದ ಅಧಿಕಾರಿಗಳ ನಡೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್​ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ತಹಶೀಲ್ದಾರ್​​ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದರು.

ಹಥ್ರಾಸ್​ ಅತ್ಯಾಚಾರ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳನ್ನು ತಡೆಯಲು ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರ ವಿಫಲವಾಗಿದೆ. ಅಲ್ಲದೆ ಉತ್ತರ ಪ್ರದೇಶದ ಪೊಲೀಸರು, ಅಪರಾಧಗಳನ್ನು ಮರೆಮಾಚಲು ಪ್ರಕರಣದ ಸಾಕ್ಷ್ಯಗಳನ್ನು ನಾಶಮಾಡುತ್ತಿದ್ದಾರೆ ಎಂದು ಸಂಘಟನೆ ಸದಸ್ಯರು ಆರೋಪಿಸಿದರು.

ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣವನ್ನು ಇತರೆ ರಾಜ್ಯದ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ ನೀಡಬೇಕು. ಉತ್ತರ ಪ್ರದೇಶ ಸರ್ಕಾರವು ಸಂತ್ರಸ್ತೆಯ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.