ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯವನ್ನು ಹೊಟ್ಟೆ ಕಿಚ್ಚಿನಿಂದ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಯಡಿಯೂರಪ್ಪ ಗ್ರಾಮ ವಾಸ್ತವ್ಯ ವಿರೋಧ ಮಾಡುವುದು ಸರಿಯಲ್ಲ. ಇಂತಹ ಗೊಡ್ಡು ಬೆದರಿಕೆಗಳಿಗೆ ಕುಮಾರಸ್ವಾಮಿ ಹೆದರುವುದಿಲ್ಲ ಎಂದರು. ಅಷ್ಟೇ ಅಲ್ಲ ಯಡಿಯೂರಪ್ಪ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರೂ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡುವುದು ಸಮಂಜಸವಲ್ಲ. ಹೊಟ್ಟೆಕಿಚ್ಚಿನಿಂದ ಯಡಿಯೂರಪ್ಪ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.