ETV Bharat / state

ಕಾರ್ಮಿಕ ವಿರೋಧಿ ನೀತಿ ಕೈಬಿಡುವಂತೆ ಆಗ್ರಹಿಸಿ ಮನವಿ

ಲಾಕ್​ಡೌನ್​ ಅವಧಿಯಲ್ಲಿ ಪೂರ್ಣ ವೇತನ ನೀಡಬೇಕು. ವೇತನ ಪಾವತಿಸದ ಕಾರಣ ದುಡಿಯುವ ವರ್ಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆ ಸರ್ಕಾರ ಗಮನ ನೀಡಬೇಕು ಎಂದು ಕಾರ್ಮಿಕ ಸಂಘಗಳ ಜಂಟಿ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Joint Committee on Trade Unions protest in Dharwad
ಕಾರ್ಮಿಕ ವಿರೋಧಿ ನೀತಿ ಕೈಬೀಡುವಂತೆ ಆಗ್ರಹಿಸಿ ಮನವಿ
author img

By

Published : May 18, 2020, 12:44 PM IST

ಧಾರವಾಡ: ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್​​ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಲಾಕ್​ಡೌನ್​ ಅವಧಿಯಲ್ಲಿ ಪೂರ್ಣ ವೇತನ ನೀಡಬೇಕು. ವೇತನ ಪಾವತಿಸದ ಕಾರಣ ದುಡಿಯುವ ವರ್ಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ‌. ಕೆಲ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಮಿಕ ಕಾನೂನುಗಳ ಅನುಷ್ಠಾನಕ್ಕೆ ಮುಂದಾಗಿಲ್ಲ. ಇಂತಹ ಕ್ರಮದಿಂದ ಕನಿಷ್ಠ ವೇತನ ಪಾವತಿ ಕಾಯ್ದೆಯ ಸೌಲಭ್ಯವೂ ಕಾರ್ಮಿಕರಿಗೆ ಸಿಗುವುದಿಲ್ಲ. ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಕೈಬಿಟ್ಟು, ಕಾರ್ಮಿಕ ಪರ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.