ಹುಬ್ಬಳ್ಳಿ : ಕೊರೊನಾ ನಿಯಂತ್ರಣಕ್ಕೆ ಧಾರವಾಡ ಜಿಲ್ಲಾಡಳಿತ ಶತಾಯು ಗತಾಯು ಹೋರಾಟ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಈಗ ಕೋವಿಡ್ ಚಿಕಿತ್ಸೆಗೆ ಮತ್ತಷ್ಟು ಬಲ ಬಂದಂತಾಗಿದೆ.
ಅವಳಿನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಚಿಕಿತ್ಸೆಗೆ ಆಮ್ಲಜನಕ ಕೊರತೆ ನೀಗಿಸುವುದಕ್ಕಾಗಿ ಧಾರವಾಡ ಜಿಲ್ಲೆಗೆ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ ಕುರಿತು ಕೇಂದ್ರ ಸರ್ಕಾರಕ್ಕೆ ಸಚಿವ ಪ್ರಲ್ಹಾದ್ ಜೋಶಿ ಪತ್ರ ಬರೆದಿದ್ದಾರೆ.
ಸಚಿವರ ಮನವಿಗೆ ಸ್ಪಂದನೆ ಸಿಕ್ಕಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪ್ರಲ್ಹಾದ್ ಜೋಶಿಯವರು ಪತ್ರ ಬರೆದ ಬೆನ್ನಲ್ಲೇ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ.
ಇನ್ನು, ಕಿಮ್ಸ್‌ನಲ್ಲಿ 3 ಹಾಗೂ ಧಾರವಾಡದ ಸಿವಿಲ್ ಆಸ್ಪತ್ರೆಯಲ್ಲಿ ಒಂದು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೊಳ್ಳಲಿದೆ. ಕೇಂದ್ರ ಸರ್ಕಾರ ಸ್ವಾಮ್ಯದ ಎಂಆರ್ಪಿಎಲ್, ಒಎನ್‌ಜಿಸಿ ಹಾಗೂ ಎನ್‌ಎಂಡಿಸಿ ಕಂಪನಿಗಳಿಗೆ ತಕ್ಷಣ ಆದೇಶಿಸಿ ಧಾರವಾಡ ಜಿಲ್ಲೆಗೆ ನಾಲ್ಕು ಘಟಕ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ.