ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತಿಸಿದರು. ಇಂದಿನಿಂದ ಎರಡು ದಿನಗಳ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸದಲ್ಲಿರುವ ನಡ್ಡಾ ಅವರು ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಬಿ.ವಿ.ಬಿ ಕಾಲೇಜಿನಲ್ಲಿ ಸಂವಾದ ನಡೆಸಲಿದ್ದಾರೆ. ಪ್ರಬುದ್ಧರ ಜೊತೆಗಿನ ಸಂವಾದದ ಬಳಿಕ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸರಣಿ ಸಭೆ ಮಾಡಲಿದ್ದಾರೆ.
ನಂತರ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಿರುವ ನಡ್ಡಾ, ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಯ ಮೇಲಾಗಿರುವ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಲಿದ್ದಾರೆ. ನಳೀನ್ ಕುಮಾರ್ ಕಟೀಲ್, ಮಹೇಶ್ ತೆಂಗಿನಕಾಯಿ, ಎಂ.ಆರ್.ಪಾಟೀಲ್, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್ ಅವರು ನಡ್ಡಾ ಜೊತೆಗಿದ್ದಾರೆ.
ಇದನ್ನೂ ಓದಿ : ಶಿಗ್ಗಾಂವಿಯಲ್ಲಿ ನಾಳೆ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ: ಬೃಹತ್ ರ‍್ಯಾಲಿಯಲ್ಲಿ ಕಿಚ್ಚ ಸುದೀಪ್ ಭಾಗಿ
ಸಂವಾದದಲ್ಲಿ ಮೋದಿ ಕೊಂಡಾಡಿದ ಜೆ ಪಿ ನಡ್ಡಾ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರು ಜಿಲ್ಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಕೊಂಡಾಡಿದ್ದಾರೆ.
ಇದನ್ನೂ ಓದಿ: ಗೋವಿಂದ ಕಾರಜೋಳ - ಮುರುಗೇಶ ನಿರಾಣಿ ನಾಮಪತ್ರ ಸಲ್ಲಿಕೆ.. ಸಿಎಂ ಬೊಮ್ಮಾಯಿ ಭಾಗಿ.. ಶೆಟ್ಟರ್‌ಗೆ ಟಾಂಗ್
ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಎಪ್ಪತ್ತು ವರ್ಷದಲ್ಲಿ ಸಮಾಜವನ್ನು ಒಡೆದಿದೆ. ಸಮಾಜ ಒಡೆಯುತ್ತಾ ಒಡೆಯುತ್ತಾ ಅವರು ತಾವೇ ಒಡೆದು ಹೋಗಿದ್ದಾರೆ. ತಮಿಳುನಾಡು, ಆಂಧ್ರ, ತೆಲಂಗಾಣದಲ್ಲಿ ಒಡೆದು ಹೋಗಿದ್ದಾರೆ. ಕಾಂಗ್ರೆಸ್‌ನವರು ಕರ್ನಾಟಕದಲ್ಲೂ ವಿಭಜನೆಯಾಗಿದ್ದಾರೆ ಎಂದು ಹೇಳಿದರು.ಪ್ರಧಾನಿಗಳು ಎಲ್ಲರನ್ನೂ ಒಗ್ಗಟ್ಟಾಗಿ, ವಿಶ್ವಾಸಕ್ಕೆ ತೆಗೆದುಕೊಂಡು ಮುಂದೆ ಸಾಗುತ್ತಿದ್ದಾರೆ. ಭಾರತದ ರಾಜಕೀಯದ ಸಂಸ್ಕೃತಿಯನ್ನು ಮೋದಿಯವರು ಬದಲಿಸಿದ್ದಾರೆ. ಬಡವರು, ಆದಿವಾಸಿಗಳಿಗೆ ಪದ್ಮ ಪ್ರಶಸ್ತಿ ಸಿಗುತ್ತಿದೆ. ಇದು ಮೋದಿ ನೇತೃತ್ವದ ಆಡಳಿತ ಎಂದು ಹೇಳಿದರು.
ಇದನ್ನೂ ಓದಿ: ಸಂವಾದದಲ್ಲಿ ಮೋದಿ ಕೊಂಡಾಡಿದ ನಡ್ಡಾ: ಶೆಟ್ಟರ್ ಟಿಕೆಟ್ ಕುರಿತ ನಿರ್ಧಾರಕ್ಕೆ ಸಮರ್ಥನೆ
ಶೆಟ್ಟರ್‌ಗೆ ಟಿಕೆಟ್ ನಿರಾಕರಣೆ ಸಮರ್ಥನೆ: ಸಂವಾದದಲ್ಲಿ ವ್ಯಕ್ತಿಯೊಬ್ಬರು 16 ಪಾಲಿಕೆ ಸದಸ್ಯರ ಸಾಮೂಹಿಕ ರಾಜೀನಾಮೆ ವಿಚಾರ ಪ್ರಸ್ತಾಪ ಮಾಡಿ, ನಿಮ್ಮದು ಶಿಸ್ತಿನ ಪಕ್ಷ ಎಂದು ಹೇಳುತ್ತೀರಿ. ಅವರ ಮೇಲೆ ಏನು ಕ್ರಮ ಕೈಗೊಳ್ಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿಯೇ ಕ್ರಮ ಕೈಗೊಳ್ಳುತ್ತೇವೆ. ಅವರು ಕಾಂಗ್ರೆಸ್‌ಗೆ ಹೋಗಿದ್ದಾರೆ. ನಾವು ತೆಗೆದುಕೊಂಡ ನಿರ್ಧಾರ ಸರಿಯಾಗಿದೆ ಎಂದು ಪರೋಕ್ಷವಾಗಿ ಶೆಟ್ಟರ್‌ಗೆ ಟಿಕೆಟ್ ಕೊಡದೇ ಇರುವುದನ್ನು ಸಮರ್ಥಿಸಿಕೊಂಡರು.
ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಆರಗ ಜ್ಞಾನೇಂದ್ರ