ಹುಬ್ಬಳ್ಳಿ : ಕೊರೊನಾದಿಂದಾಗಿ ದೇಶವೇ ಸಂಕಷ್ಟದಲ್ಲಿ ಸಿಲುಕಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈಲು ಸೇವೆಯನ್ನು ಪ್ರಾರಂಭಿಸಲು ಹೊರಟಿರುವುದು ಖಂಡನೀಯ ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ಸು ಪಡೆಯಬೇಕೆಂದು ಹೋರಾಟ ಸಮಿತಿ ಸದಸ್ಯರು ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.
ಭಾರತದಲ್ಲಿ ಇಂದಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದೆ ಲಾಕ್ಡೌನ್ ಸಂದರ್ಭದಲ್ಲಿ ರೈಲ್ವೆ ಸಂಚಾರಕ್ಕೆ ಅನುಮತಿ ನೀಡಿರುವುದು ಮೂರ್ಖತನದ ಪರಮಾವಧಿ ಎಂದು ಆರೋಪಿಸಿಸಿದರು.
ರೈಲು ಸಂಚಾರಕ್ಕೆ ಅನುಮತಿ ನೀಡಿರುವುದನ್ನು ಹಿಂಪಡೆದು ಜನರ ಹಿತ ಕಾಪಾಡಬೇಕು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಆಗ್ರಹಿಸಿದರು.