ಹುಬ್ಬಳ್ಳಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿ ಸಲ ಧಾರವಾಡ ಜಿಲ್ಲೆಗೆ ಬಂದಾಗ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಳಸಾ ಬಂಡೂರಿ ಹೋರಾಟಗಾರರು ಈ ಬಾರಿ ಸಹ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೈಯಲ್ಲಿ ಗುಲಾಬಿ ಹೂವು ಹಿಡಿದು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಘೋಷಣೆ ಕೂಗಿದರು.
ಐದು ದಶಕದ ಹೋರಾಟವಾಗಿರುವ ಮಹದಾಯಿ ಬಗ್ಗೆ ಮಹತ್ವದ ನಿರ್ಧಾರವನ್ನು ಘೋಷಣೆ ಮಾಡಬೇಕು ಹಾಗೂ ಕೃಷ್ಣ, ತುಂಗಭದ್ರಾ ನೀರು ಸದುಪಯೋಗ ಮತ್ತು ರೈತರ ಮೇಲಿನ ಕೇಸ್ ಹಿಂಪಡೆಯುವಂತೆ ಒತ್ತಾಯಿಸಿ ಮೋದಿ ಆಗಮನಕ್ಕೂ ಮುನ್ನವೇ ತಮ್ಮ ಆಕ್ರೋಶ ಹೊರಹಾಕಿ ಎಲ್ಲರ ಗಮನ ಸೆಳೆದರು.
ಇದನ್ನೂ ಓದಿ: ಸಕ್ಕರೆ ನಾಡಲ್ಲಿ ಮೋದಿಗೆ ಅಕ್ಕರೆಯ ಸ್ವಾಗತ: ಭರ್ಜರಿ ರೋಡ್ ಶೋ, ಹೂವಿನ ಸುರಿಮಳೆ!- ವಿಡಿಯೋ
ಬಸ್‌ಗಳ ಕೊರತೆ, ಜನರ ಪರದಾಟ: ಐಐಟಿ ಉದ್ಘಾಟನೆಗೆ ಧಾರವಾಡಕ್ಕೆ ಬರುತ್ತಿರುವ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹಳ್ಳಿ ಹಳ್ಳಿಯಿಂದ ಜನ ಆಗಮಿಸಿವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಹುತೇಕ ಬಸ್ಗಳು ಕಾರ್ಯಕ್ರಮಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಜನರು ಬೇರೆ ಊರುಗಳಿಗೆ ತೆರಳಲು ಪರದಾಡುವಂತಾಗಿದೆ. ಹುಬ್ಬಳ್ಳಿಯಿಂದ ಗ್ರಾಮೀಣ ಭಾಗಕ್ಕೆ ಸಂಚಾರ ಕಲ್ಪಿಸುವ ಬಸ್ ಮತ್ತು ಗದಗ, ಹಾವೇರಿ, ಧಾರವಾಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಇತರೆ ವಾಹನಗಳ ಮೊರೆ ಹೋಗುತ್ತಿದ್ದಾರೆ.
ಇದನ್ನೂ ಓದಿ: ಇಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಕೇಸರಿ ಮಯವಾದ ಸಕ್ಕರೆ ನಾಡು
ಉಚಿತ ಬಸ್ ವ್ಯವಸ್ಥೆ: ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ಗಳ ಮೂಲಕ ಲಕ್ಷಾಂತರ ಜನ ಆಗಮಿಸುತ್ತಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಜನರ ಓಡಾಟಕ್ಕೆ ಮಾತ್ರ ಸಮಸ್ಯೆ ಬಂದೊದಗಿದೆ.
ಇದನ್ನೂ ಓದಿ: ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ: ಮಂಡ್ಯದತ್ತ ಪ್ರಯಾಣ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಮೋದಿ ಆಗಮನದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಭದ್ರತೆ ಕಲ್ಪಿಸಲಾಗಿದೆ. ಜೊತೆಗೆ ಇಲ್ಲಿ ಡಿಸಿಪಿ, ಪೊಲೀಸ್ ಇನ್ಸ್ಪೆಕ್ಟರ್, ಸೇರಿ ಸುಮಾರು 200 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಮೋದಿ- ಶಾ ದಕ್ಷಿಣ ಭಾರತ ದಂಡಯಾತ್ರೆ: ಚುನಾವಣೆಗೂ ಮೊದಲು ಪಕ್ಷ ಸಂಘಟನೆ ಗುರಿ