ಹುಬ್ಬಳ್ಳಿ: ಕೇಂದ್ರ ಹಾಗು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದೆ.
ಕೃಷಿ, ಎಪಿಎಂಸಿ ಮತ್ತು ಅಗತ್ಯ ವಸ್ತುಗಳ ಸಂಗ್ರಹ ತಿದ್ದುಪಡಿ ಕಾಯ್ದೆಗಳು, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ವಿದ್ಯುತ್ ಕಾಯ್ದೆಯನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ತಿದ್ದುಪಡಿಗಳು ರೈತ ವಿರೋಧಿಯಾಗಿವೆ. ಇವುಗಳಿಂದ ರೈತರಿಗೆ ಯಾವುದೇ ಅನುಕೂಲವಿಲ್ಲ. ಹೀಗಾಗಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.