ಧಾರವಾಡ : ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಅವರು ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದ ಕಾರ್ಗಿಲ್ ಸ್ತೂಪಕ್ಕೆ ಪುಷ್ಪಾರ್ಚನೆ ಮಾಡಿದರು.
ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಿಸಿದ ವೀರಯೋಧರನ್ನು ನೆನೆದರು ಹಾಗೂ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕರು, ಧಾರವಾಡ ಮಹಾನಗರ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಕಿರಣ ಉಪ್ಪಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಯ್ಯ ಹಿರೇಮಠ, ಶರಣು ಅಂಗಡಿ ಹಾಗೂ ಹಲವರಿದ್ದರು.