ಹುಬ್ಬಳ್ಳಿ : ಹುಮನಾಬಾದ್ನಲ್ಲಿ ಕರ್ತವ್ಯನಿರತ ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರ ಮೇಲೆ ನಡೆದ ಅಮಾನುಷ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಬೀದರ್ನ ಹುಮನಾಬಾದ್ನಲ್ಲಿ ಶುಕ್ರವಾರ ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾನಿರತ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ತಹಶೀಲ್ದಾರ್ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದಲ್ಲದೇ, ತಹಶೀಲ್ದಾರ್ ಪ್ರದೀಪ್ ಹಿರೇಮಠ ಮೇಲೆ ಹಲ್ಲೆ ನಡೆಸಿರೋದು ಖಂಡನೀಯವಾಗಿದೆ.
ಸಾರ್ವಜನಿಕರು ತಾಳ್ಮೆ ಕಳೆದುಕೊಂದು ಅಧಿಕಾರಿಗಳ ಮೇಲೆ ಹಲ್ಲೆ ಮಾಡುವಂತಹ ಕೃತ್ಯದಿಂದ ಸರ್ಕಾರಿ ಆಫೀಸರ್ಗಳು ಭಯಬೀತರಾಗಿದ್ದಾರೆ. ಹಲವು ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ. ರಾಜ್ಯದಲ್ಲಿ ಕಠಿಣ ಕಾನೂನು ಕ್ರಮ ಜಾರಿಯಲ್ಲಿರದ ಹಿನ್ನೆಲೆ ಇಂತಹ ಘಟನೆಗಳಿಗೆ ಕಾರಣವಾಗಿದೆ.
ಹಾಗಾಗಿ, ಸರ್ಕಾರ ಕಠಿಣ ಕಾನೂನು ರೂಪಿಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವ ರಾಜ್ಯದ ಸರ್ಕಾರಿ ನೌಕರರು ನಿರ್ಭೀತಿಯಿಂದ ತಮ್ಮ ಕಾರ್ಯ ನಿರ್ವಹಿಸುವಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂಘದ ಪ್ರಮುಖರು ಮನವಿ ಮಾಡಿದರು.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಅವ್ಯವಹಾರ ವಿಚಾರಣೆಗೆ ಎಡಿಜಿಪಿ ಎಸ್. ಮುರುಗನ್ ನೇಮಕ
ಈ ವೇಳೆ ಸಂಘದ ಅಧ್ಯಕ್ಷ ಪ್ರಲ್ಹಾದ್ ಗೆಜ್ಜಿ, ಗ್ರಾಮೀಣ ತಹಶೀಲ್ದಾರ್ ಪ್ರಕಾಶ ಕಾಶಿ, ವಿ.ಎಫ್.ಚುಳಕಿ, ಎಮ್.ಎಚ್.ಜಂಗ್ಲಿ, ಜಿ.ಎಸ್.ಹುಬ್ಬಳ್ಳಿ, ಎನ್.ವಿ.ಬದ್ದ, ರಾಮಚಂದ್ರ, ಬಿ.ಎಸ್.ಸಾಲಿಗೌಡ್ರ, ಎಸ್.ಎಚ್.ಹಿರೇಮಠ ಸೇರಿದಂತೆ ಮುಂತಾದವರು ಇದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂ