ಹುಬ್ಬಳ್ಳಿ: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಸರ್ಕಾರಿ ಶಾಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಮತಿ ನಿರಾಕರಿಸಲಾಗಿದೆ. ಧಾರವಾಡದಲ್ಲಿ ಶಿಕ್ಷಣ ಇಲಾಖೆ SSLC ಪರೀಕ್ಷೆ ಹಿನ್ನೆಲೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲೆಯ 116 ಕೇಂದ್ರಗಳಲ್ಲಿ 29,599 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಏನೂ ಅಡಚಣೆ ಆಗದಂತೆ ನಿರ್ಭೀತಿಯಿಂದ ಎಕ್ಸಾಂ ಬರೆಯುವಂತೆ ಉತ್ತಮ ವಾತಾವರಣ ರೂಪಿಸಲಾಗಿದೆ. ಇಂದು 'ಕನ್ನಡ' ವಿಷಯ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ.
ಈ ಬಾರಿಯೂ ಸಹ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನ ಪಾಲಿಸಬೇಕಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಹಿಜಾಬ್ ಧರಿಸಿದ ಮಕ್ಕಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಹಿಜಾಬ್ ತೆಗೆದಿಡಲು ಪ್ರತ್ಯೇಕ ವ್ಯವಸ್ಥೆ ಕೂಡ ಮಾಡಲಾಗಿದೆ.
ಇದನ್ನೂ ಓದಿ: ಹಿಜಾಬ್ ವಿವಾದದ ನಡುವೆಯೇ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ