ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕವಿವಿ ವ್ಯಾಪ್ತಿಯ ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ಎಸ್‌ಸಿ - ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಯಲ್ಲಿ ಉಂಟಾದ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವಂತೆ ತಾರತಮ್ಯ ಹಾಗೂ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಇದ್ಯಾವುದಕ್ಕೂ ಪ್ರತಿಕ್ರಿಯಿಸದ ಸಚಿವರು ನೇರವಾಗಿ ಕಾರ್ಯಕ್ರಮದತ್ತ ತೆರಳಿದರು.
ಇದನ್ನೂ ಓದಿ : ವಿದ್ಯಾರ್ಥಿಗಳ ಸ್ಕಾಲರ್ಶಿಪ್ ರದ್ದು ಮಾಡಿರುವ ನೀತಿ ಕೇಂದ್ರ ಸರ್ಕಾರದ ಹೊಣೆಗೇಡಿತನದ ನಿರ್ಧಾರ: ಸಿದ್ದರಾಮಯ್ಯ