ಧಾರವಾಡ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಕಾರಣ ಕರ್ನಾಟಕ ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸೋಮವಾರದಂದು ನಡೆಯಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: COVID: ರಾಜ್ಯದಲ್ಲಿಂದು 775 ಮಂದಿಗೆ ಕೋವಿಡ್, 9 ಸೋಂಕಿತರ ಸಾವು