ಧಾರವಾಡ : ಕೇಂದ್ರ ಸರ್ಕಾರದ ವಿರುದ್ಧ ನಾಳೆ ಕರ್ನಾಟಕ ಬಂದ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದ ನಾಳಿನ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದ್ದು, ಧಾರವಾಡದ ಕರ್ನಾಟಕ ವಿವಿ ನಾಳೆ ಸ್ನಾತಕ ಪರೀಕ್ಷೆಗಳನ್ನು ನಡೆಸಲು ಮುಂದಾಗಿತ್ತು. ಆದರೆ ನಾಳೆ ಬಂದ್ ಇರುವುದರಿಂದ ಎಲ್ಲಾ ಸ್ನಾತಕ ಪರೀಕ್ಷೆಗಳು ಮುಂದೂಡಿಕೆ ಮಾಡಿ ಕವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಕದಮ ಮಾಹಿತಿ ನೀಡಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕವಿವಿ ವೆಬ್ ಸೈಟ್ www.kud.ac.in ಮೂಲಕ ಪಡೆದುಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ.