ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಯಾಗಿ ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಕೂಡಲೇ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಬೇಕು ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ್ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿ ಕುರಿತಂತೆ ರಾಜ್ಯ ಸರ್ಕಾರ ನಿರ್ಧಾರ ತಗೆದುಕೊಳ್ಳದಿರುವುದು ಖಂಡನೀಯವಾಗಿದೆ. ತಕ್ಷಣ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಮಹದಾಯಿ ಜೊತೆಗೆ ಉತ್ತರ ಕರ್ನಾಟಕಕ್ಕೆ ಒಂಬತ್ತು ಕಚೇರಿಗಳ ಸ್ಥಳಾಂತರ ಮಾಡುವುದು ಹಾಗೂ ಗಡಿ ವಿಚಾರದಲ್ಲಿ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರ ಸಿಎಂಗೆ ದಿಟ್ಟ ಉತ್ತರ ನೀಡುವಂತೆ ಒತ್ತಾಯಿಸಿದರು.
ಇದನ್ನು ಓದಿ: ಸದನದಲ್ಲಿ ಅಧಿಕಾರಿಗಳ ಗೈರು: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗರಂ
ತಕ್ಷಣ ಕಾಮಗಾರಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡವು ನೀಡಿದ್ದು, ಒಂದು ತಿಂಗಳಲ್ಲಿ ಕಾಮಗಾರಿ ಆರಂಭ ಮಾಡದಿದ್ರೆ ಬೆಂಗಳೂರು ಚಲೋ ರ್ಯಾಲಿ ಹಮ್ಮಿಕೊಳ್ಳಲಾಗುವುದು. ಬೆಂಗಳೂರು ಚಲೋ ರ್ಯಾಲಿ ಹಿನ್ನೆಲೆಯಲ್ಲಿ ನರಗುಂದ ಪಟ್ಟಣದಲ್ಲಿ ನಾಲ್ಕು ಜಿಲ್ಲೆಯ ರೈತರು, ಕನ್ನಡಪರ ಹೋರಾಟಗಾರರು, ಸಂಘ-ಸಂಸ್ಥೆಗಳ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಬೆಂಗಳೂರು ಚಲೋ ರ್ಯಾಲಿಯ ರೂಪುರೇಷೆಗಳನ್ನ ಸಿದ್ಧಪಡಿಸುವುದಾಗಿ ಹೇಳಿದ್ದಾರೆ.