ETV Bharat / state

ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ: ಇಬ್ಬರು ಗಾಂಜಾ ಮಾರಾಟಗಾರರ ಬಂಧನ - ಹುಬ್ಬಳ್ಳಿಯಲ್ಲಿ ಅಕ್ರಮ ಗಾಂಜಾ ಮಾರಾಟ

ಹುಬ್ಬಳ್ಳಿಯ ಕೇಶ್ವಾಪೂರ ಠಾಣೆ ಪೊಲೀಸರು ಅವಳಿ ನಗರದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರು ಗಾಂಜಾ ಮಾರಾಟಗಾರರ ಬಂಧನ
Keshwapur police arrested two illegal marijuana selling accused in Hubli
author img

By

Published : Mar 27, 2021, 9:35 AM IST

ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಹುಬ್ಬಳ್ಳಿಯ ಕೇಶ್ವಾಪೂರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Keshwapur police arrested two illegal marijuana selling accused in Hubli
ಪೊಲೀಸರು ವಶಕ್ಕೆ ಪಡೆದಿರುವ ಗಾಂಜಾ

ಸ್ಯಾಮುವೆಲ್ ಏಸು ಬಿಲ್ಲಾ ಮತ್ತು ನವೀನ್​ ಕುಮಾರ್ ಪುರುಷೋತ್ತಮ ಏಸು ಮಾಲಾ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತಂತೆ ಮಾಹಿತಿ ಪಡೆದ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 250 ಗ್ರಾಂ ತೂಕದ 25 ಸಣ್ಣ ಸಣ್ಣ ಗಾಂಜಾ ಪ್ಯಾಕೆಟ್​​​ಗಳು ಮತ್ತು 290 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕೇಶ್ವಾಪೂರ ಠಾಣೆ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.