ಹುಬ್ಬಳ್ಳಿ: ಎನ್.ಪಿ.ಎಸ್ ಸೌಲಭ್ಯ, ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಿಮ್ಸ್ ಶುಶ್ರೂಷ ಸಿಬ್ಬಂದಿಯಿಂದ ಕಪ್ಪು ಪಟ್ಟಿ ಧರಿಸಿ ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ.
ಕಿಮ್ಸ್ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ, ಕಪ್ಪು ಪಟ್ಟಿ ಧರಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ಹಾಗೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ, ಮೂಲ ವೇತನ 50% ಹೆಚ್ಚುವರಿ ನೀಡಿ ಎಂದು ಒತ್ತಾಯಿಸಿದರು. ಬೇಡಿಕೆ ಈಡೇರುವವರೆಗೂ ಕಪ್ಪು ಪಟ್ಟಿ ಧರಿಸಿಯೇ ಕೆಲಸ ಪ್ರಾರಂಭಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.