ಹುಬ್ಬಳ್ಳಿ: ವಿವಿಧ ಸಂಘಟನೆಯ ಮುಖಂಡರು ಚೆನ್ನಮ್ಮ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮನ 242ನೇ ಜಯಂತಿ ಆಚರಿಸಿದರು.
ಆದರೆ ಗದಗ ರಸ್ತೆಯಲ್ಲಿ ರೈಲ್ವೆ ಇಲಾಖೆಯು ಮುಂದಿರುವ ಚೆನ್ನಮ್ಮ ಪುತ್ಥಳಿಗೆ ರೈಲ್ವೆ ಇಲಾಖೆ ಯಾವುದೇ ರೀತಿಯ ಗೌರವವನ್ನು ನೀಡುತ್ತಿಲ್ಲ ಎಂದು ಆರೋಪಿಸಿ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ್ದು, ಮುಂಬರುವ ದಿನಗಳಲ್ಲಿ ಸ್ಥಳೀಯ ಮುಖಂಡರ ಸಹಭಾಗಿತ್ವದಲ್ಲಿ ಉತ್ತಮ ರೀತಿಯಲ್ಲಿ ಆಚರಣೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.