ಧಾರವಾಡ: ಮುಕ್ತ ವ್ಯಾಪಾರ ಒಪ್ಪಂದದಡಿ ಎಫ್ಟಿಎ ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಆಮದಿಗೆ ಶುಲ್ಕ ವಿನಾಯತಿ ನೀಡದಿರಲು ಆಗ್ರಹಿಸಿ ಹಾಲು ಉತ್ಪಾದಕರ ಸಂಘಗಳ ವತಿಯಿಂದ ಪ್ರತಿಭಟನೆ ನಡೆಸಲಾಯ್ತು.
ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸದಸ್ಯರು ಧಾರವಾಡದ ಉಳವಿ ಬಸವೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ವಿವಿಧ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲ ಹೊತ್ತು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಾಲು ಉತ್ಪಾದಕ ಒಕ್ಕೂಟದ ಸದಸ್ಯರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.