ETV Bharat / state

ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆಯಿಂದ ಆಗಸ್ಟ್‌ 10ರಂದು ಪ್ರತಿಭಟನೆಗೆ ಕರೆ

ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ ಖಾಲಿ ಹುದ್ದೆಗಳಿಗೆ ಸರ್ಕಾರ ಖಾಸಗಿ ಏಜೆನ್ಸಿಯನ್ನು ಹೊರಗಿಟ್ಟು, ಇಲಾಖೆಯಿಂದಲೇ ನೇಮಕಾತಿ ಮಾಡಿ ಸೇವಾ ಭದ್ರತೆ ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಿಕೊಡಬೇಕೆಂದು ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.

Etv Bharatkptcl-contract-workers-welfare-forum-calls-for-protest-on-august-10
ಸರ್ಕಾರದಿಂದ ವಿಳಂಬ ಧೋರಣೆ: ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆಯಿಂದ ಆ.10ಕ್ಕೆ ಪ್ರತಿಭಟನೆಗೆ ಕರೆ
author img

By

Published : Jun 23, 2023, 4:19 PM IST

Updated : Jun 23, 2023, 7:01 PM IST

ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆಯಿಂದ ಆಗಸ್ಟ್‌ 10ರಂದು ಪ್ರತಿಭಟನೆಗೆ ಕರೆ

ಹುಬ್ಬಳ್ಳಿ: ಕೆಪಿಟಿಸಿಎಲ್ ಮತ್ತು ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಹಾಗೂ ಸಮಿತಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಣೆ ಮಾಡುತ್ತಿದ್ದು, ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ (ರಿ) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಗಸ್ಟ್ 10 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಲೀಲಾಸಾಗರ ಎಂ.ಎಸ್ ಹಾಗೂ ಉಪಾಧ್ಯಕ್ಷ ಪರಶುರಾಮ ರಾಠೋಡ ತಿಳಿಸಿದರು.

ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 18-20 ವರ್ಷಗಳಿಂದ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಸ್ಟೇಷನ್ ಆಪರೇಟರ್, ಸಹಾಯಕರು, ಗ್ಯಾಂಗ್​ಮನ್, ಮೀಟರ್ ರೀಡರ್ ಸೇರಿದಂತೆ ವಿವಿಧ ರೀತಿಯ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲೇ ಪ್ರಾಣಾಪಾಯದ ಕೆಲಸಗಳನ್ನು ನಿರ್ವಹಿಸುತ್ತಿರುವ ನೌಕರರು ಯಾವುದೇ ಸೇವಾ ಭದ್ರತೆಯಿಲ್ಲದೇ ಅಭದ್ರತೆಯ ಜೀವನ ನಡೆಸುವಂತಾಗಿದೆ. ಕೂಡಲೇ ಸರ್ಕಾರ ಖಾಸಗಿ ಏಜೆನ್ಸಿಯನ್ನು ಹೊರಗಿಟ್ಟು, ಇಲಾಖೆಯಿಂದಲೇ ನೇಮಕಾತಿ ಮಾಡಿ, ಸೇವಾ ಭದ್ರತೆ ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.

ಈಗಾಗಲೇ ಈ ಹಿಂದಿನ ಸರ್ಕಾರದಲ್ಲಿ 2022 ಡಿಸೆಂಬರ್ 3ರಿಂದ 2023 ಮಾರ್ಚ್ 3 ರವರೆಗೆ ಹೊರಗುತ್ತಿಗೆ ನೌಕರರ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚನೆ ಮಾಡಲು ಆದೇಶವಿದ್ದರೂ ಹಿಂದಿನ ಬಿಜೆಪಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿ ನೌಕರರಿಗೆ ಅನ್ಯಾಯ ಮಾಡಿದೆ. ಈ ದಿಸೆಯಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೌಕರರ ಪರವಾದ ನಿಲುವನ್ನು ತೆಗೆದುಕೊಂಡು ಇಂಧನ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ನ್ಯಾಯ ಒದಗಿಸಬೇಕು. ಇಲ್ಲದೇ ಹೋದಲ್ಲಿ ಬರುವ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಆಗಲಿದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ವಿರೇಶ ಜವಳಿ, ಮಂಜುನಾಥ ಹಾದಿಮನಿ, ನವೀನ ಎಸ್.ಕೆ, ವಿನೋದ ರಾಠೋಡ, ಬಾಳೇಶ ಹವಣಿ, ರಮೇಶ ಬೆಣ್ಣಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Govt Jobs: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇದೆ ಸಮಾಲೋಚಕರ ಹುದ್ದೆ

ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು -ಸಿಎಂ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ ಆಗಿದೆ. 2013 ರಿಂದ 2018ರ ವರೆಗೆ ಇದ್ದ LOC ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ ಮಾಡಿದರು.

Last Updated : Jun 23, 2023, 7:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.