ETV Bharat / state

ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟಿಸಿದ ಕೆ.ಎಸ್ ಈಶ್ವರಪ್ಪ - ಜಲಶಕ್ತಿ ಅಭಿಯಾನ

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಅರಸಿ ಬರುವವರಿಗೆ ತ್ವರಿತವಾಗಿ ಜಾಬ್ ಕಾರ್ಡ್​​​ ನೀಡಿ ಉದ್ಯೋಗ ಒದಗಿಸುವ ಕಾರ್ಯಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜ್ಯದ ಸಾಧನೆಯನ್ನು ಕೇಂದ್ರ ಸರ್ಕಾರ ಪ್ರಶಂಸೆ ಮಾಡಿ 800 ಕೋಟಿ ರೂ.ಅನುದಾನ ಹೆಚ್ಚುವರಿಯಾಗಿ ನೀಡಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದ್ದಾರೆ.

KS Eshwarappa
ಕೆ.ಎಸ್ ಈಶ್ವರಪ್ಪ
author img

By

Published : Apr 9, 2021, 4:56 PM IST

ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹುಬ್ಬಳ್ಳಿಯ ಖಾಸಗಿ ಹೋಟೆಲ್​​ನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾದರು.

ಸಚಿವರಿಗೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು ಕುಣಿತ ಸೇರಿದಂತೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ಬಳಿಕ ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟಿಸಿದ ಸಚಿವರು ಮಾತನಾಡಿ, ಗ್ರಾಮಗಳಲ್ಲಿ ಕೆರೆ, ಕಲ್ಯಾಣಿ, ನಾಲಾ ಪುನಶ್ಚೇತನ, ಗೋಕಟ್ಟೆ ನಿರ್ಮಾಣ ಸೇರಿದಂತೆ ಸಾಂಪ್ರದಾಯಿಕ ಹಾಗೂ ಇತರೆ ಜಲಮೂಲಗಳ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕಾಗಿ ಪ್ರಧಾನಮಂತ್ರಿಗಳ ಆಶಯಕ್ಕೆ ಅನುಗುಣವಾಗಿ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಯೋಜನೆ ರೂಪಿಸಿ, ಇದಕ್ಕಾಗಿ 4,310 ಕೋಟಿ ರೂ.ಗಳನ್ನು ವಿನಿಯೋಗಿಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟಿಸಿದ ಕೆ.ಎಸ್ ಈಶ್ವರಪ್ಪ

ಮುಂಬರುವ 100 ದಿನಗಳಲ್ಲಿ ಈ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಬೇಸಿಗೆ ಸಂದರ್ಭದಲ್ಲಿ ಜನ, ಜಾನುವಾರುಗಳು ನೀರಿಗಾಗಿ ಪರಿತಪಿಸುವುದನ್ನು ತಪ್ಪಿಸಲು ಜಲಸಂರಕ್ಷಣೆಯ ಪ್ರಥಮ ಆದ್ಯತೆಯಾಗಿ ಮುಂಗಾರು ಪ್ರಾರಂಭವಾಗುವ ಮೊದಲೇ ಮಳೆ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಸಾಂಪ್ರದಾಯಿಕ ಜಲಮೂಲಗಳನ್ನು ಪುನಶ್ಚೇತನಗೊಳಿಸಲು ಪ್ರಧಾನಮಂತ್ರಿ ಅವರು ಕಳೆದ ಮಾರ್ಚ್ 22 ರಂದು " ಜಲಶಕ್ತಿ ಅಭಿಯಾನ- Catch the Rain" ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ನರೇಗಾ ಯೋಜನೆಗೆ ಉತ್ತಮ ಸ್ಪಂದನೆ

ಮುಂಬರುವ ನವೆಂಬರ್ 30ರ ವರೆಗೆ ಈ ಕಾರ್ಯಕ್ರಮ ಮುಂದುವರೆಯಲಿದೆ. ಸಮಗ್ರ ಕೆರೆ ಅಭಿವೃದ್ಧಿ, ಕಾಲುವೆಗಳ ಪುನಶ್ಚೇತನ, ಹೂಳು ತೆಗೆಯುವುದು, ಕೆರೆ ಏರಿ ದುರಸ್ತಿ, ಬದು ನಿರ್ಮಾಣ, ಕಲ್ಯಾಣಿ, ನಾಲಾ ಪುನಶ್ಚೇತನ, ಗೋ ಕಟ್ಟೆ, ಕೆರೆ, ಸೋಕ್ ಪಿಟ್, ಮಲ್ಟಿ ಆರ್ಚ್ ಚೆಕ್ ಡ್ಯಾಮ್​​ಗಳ ನಿರ್ಮಾಣ, ಕೊಳವೆಬಾವಿ ಮರುಪೂರಣ, ಮಳೆನೀರು ಕೊಯ್ಲು, ಅರಣ್ಯೀಕರಣ ಮತ್ತಿತರ ವೈವಿಧ್ಯಮಯ ಜಲಸಂರಕ್ಷಣೆ ಕಾರ್ಯಗಳು ರಾಜ್ಯದಲ್ಲೆಡೆ ಈ ಅವಧಿಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯಲಿವೆ ಎಂದರು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಅರಸಿ ಬರುವವರಿಗೆ ತ್ವರಿತವಾಗಿ ಜಾಬ್ ಕಾರ್ಡ್​​​​ ನೀಡಿ ಉದ್ಯೋಗ ಒದಗಿಸುವ ಕಾರ್ಯಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜ್ಯದ ಸಾಧನೆಯನ್ನು ಕೇಂದ್ರ ಸರ್ಕಾರ ಪ್ರಶಂಸೆ ಮಾಡಿ 800 ಕೋಟಿ ರೂ.ಅನುದಾನ ಹೆಚ್ಚುವರಿಯಾಗಿ ನೀಡಿದೆ. ಕೇಂದ್ರ ಸರ್ಕಾರ ಇಟ್ಟಿರುವ ಈ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ರೀತಿಯಲ್ಲಿ ಜಲಶಕ್ತಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸಂಸದೀಯ ವ್ಯವಹಾರಗಳು ,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಅವರು ನರೇಗಾ ರಥಕ್ಕೆ ಚಾಲನೆ ನೀಡಿದರು, ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು "ಆಸರೆ" ಪುಸ್ತಕ ಹಾಗೂ ನರೇಗಾ ಯಶೋಗಾಥೆಗಳ ವಿಡಿಯೋಗಳನ್ನು ಲೋಕಾರ್ಪಣೆ ಮಾಡಿದರು.

ಇದನ್ನೂ ಓದಿ: ಕೇಂದ್ರ ಸಚಿವ ಜೋಶಿ ಮನೆಯೆದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.