ಹುಬ್ಬಳ್ಳಿ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರ ಮೀಡಿಯಾ ಗ್ರೂಪ್ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹುಬ್ಬಳ್ಳಿ ಕ್ಷತ್ರೀಯ ಒಕ್ಕೂಟದ ಅಧ್ಯಕ್ಷ ಉದಯ್ ಸಿಂಗ್ ಒತ್ತಾಯಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ನಿರಾಣಿ ಅವರ ಮೀಡಿಯಾ ಗ್ರೂಪ್ನಲ್ಲಿ ಇತ್ತೀಚೆಗೆ ಹಿಂದೂ ಪವಿತ್ರ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿದಾಡಿದೆ. ಇದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ. ಈ ಕುರಿತು ಗೃಹ ಇಲಾಖೆಗೆ ದೂರು ಸಲ್ಲಿಸಿದರೂ ಸಹ ಈವರೆಗೆ ರಾಜ್ಯ ಸರ್ಕಾರ ಗೃಹ ಇಲಾಖೆ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಹಲವಾರು ಹಿಂದೂ ಸಂಘಟನೆಗಳು ಸೇರಿಕೊಂಡು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.