ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶಿಕ್ಷಕೇತರ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಇದ್ದು, ಒಟ್ಟು ಮೂರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಇನ್ನಿತರ ಪ್ರಕ್ರಿಯೆ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ: ಧಾರವಾಡ ಕರ್ನಾಟಕ ಯುನಿವರ್ಸಿಟಿಯಲ್ಲಿ ಖಾಲಿ ಇರುವ ಫ್ರೂಪ್ ರೀಡಿಂಗ್ 1, ಕಾರ್ಪೆಂಟರ್ ಮತ್ತು ಪೈಂಟರ್ 1 ಮತ್ತು ಎಲೆಕ್ಟ್ರಿಷಿಯನ್ 1 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
- ಪ್ರೂಫ್ ರೀಡರ್ ಹುದ್ದೆಗೆ ಅಭ್ಯರ್ಥಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕು. ಪ್ರೂಫ್ ರೀಡರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
- ಕಾರ್ಪೆಂಟರ್ ಮತ್ತು ಪೈಂಟರ್ ಹುದ್ದೆಗೆ ಅಭ್ಯರ್ಥಿ 7ನೇ ತರಗತಿ, ಡ್ರಾಯಿಂಗ್ ಕ್ರಾಫ್ಟ್ಮನ್ಶಿಫ್ಟ್ನಲ್ಲಿ ಪ್ರಮಾಣ ಪತ್ರವನ್ನು ಪಡೆದಿರಬೇಕು.
- ಎಲೆಕ್ಟ್ರಿಷಿಯನ್ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಮೋಟಾರ್ ಹಾಗೂ ಟ್ರಾನ್ಸ್ಫಾರ್ಮರ್ ವೈಂಡಿಂಗ್ನಲ್ಲಿ ಐದು ವರ್ಷದ ಹುದ್ದೆ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.
ವೇತನ:
- ಪ್ರೂಫ್ ರೀಡಿಂಗ್ - 27,650-52,650 ರೂ. ಮಾಸಿಕ
- ಕಾರ್ಪೆಂಟರ್ ಮತ್ತು ಪೇಂಟರ್- 21,400-42,000 ರೂ. ಮಾಸಿಕ
- ಎಲೆಕ್ಟ್ರಿಷಿಯನ್ - 23,500-47,650 ರೂ. ಮಾಸಿಕ ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಕೆ ಮಾಡಬೇಕಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾನ್ಸುಲರ್, ಕರ್ನಾಟಕ ಯುನಿವರ್ಸಿಟಿ, ಪಾವಟೆ ನಗರ್, ಧಾರವಾಡ- 58003
ಈ ಹುದ್ದೆಗಳಿಗೆ ಅಭ್ಯರ್ಥಿಗಳು 700 ರೂ. ಅರ್ಜಿ ಶುಲ್ಕವನ್ನು ಭರಿಸಬೇಕಿದೆ. ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಸಲ್ಲಿಸಬೇಕಿದೆ. ಈ ಹುದ್ದೆಗೆ ಅಕ್ಟೋಬರ್ 26ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 28 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kud.ac.in ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ 0836-2215349 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಐಐಎಸ್ಸಿಯಲ್ಲಿ ಲೈಬ್ರರಿಯನ್ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ