ETV Bharat / state

ಉ.ಕ. ನದಿಗಳ ಜೋಡಣೆ ವಿಚಾರ... ಮೋದಿ ಭೇಟಿಗೆ ತೆರಳಿದ ಕೂಡಲಸಂಗಮ ಶ್ರೀ ನೇತೃತ್ವದ ನಿಯೋಗ - undefined

ಕಾಳಿ ನದಿ‌ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಜುಲೈ 4 ರಂದು ದೆಹಲಿಯಲ್ಲಿ ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಿರಾಣಿ ವರದಿ ಜಾರಿಗೆ ಮನವಿ..
author img

By

Published : Jul 3, 2019, 7:56 PM IST

ಹುಬ್ಬಳ್ಳಿ: ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ತೆರಳಿದೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೂಡಲಸಂಗಮ ಶ್ರೀಗಳು, ಕಾಳಿ ನದಿ‌ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಜುಲೈ 4 ರಂದು ದೆಹಲಿಯಲ್ಲಿ ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.

ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ನದಿಗಳ ‌ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಿರುವುದು ಉತ್ತಮ ಬೆಳವಣಿಗೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಹಾಗೂ 500-600 ಕೆರೆಗಳ ಪುನಶ್ಚೇತನಕ್ಕೆ ಕಾಳಿ ನದಿ ಅನುಕೂಲವಾಗಲಿದೆ. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನೇ ಅಮೃತಧಾರೆ ಯೋಜನೆಯಡಿ ಕೃಷ್ಣಾ,‌ ಘಟಪ್ರಭಾ, ಮಲಪ್ರಭಾ ನದಿಗಳಿಗೆ ಜೋಡಣೆ ಮಾಡುವ ಯೋಜನೆ ರೂಪಿಸಲಾಗಿದೆ ಎಂದರು.

ಮೋದಿ ಭೇಟಿಗೆ ದೆಹಲಿಗೆ ತೆರಳಿದ ಕೂಡಲಸಂಗಮ ಶ್ರೀ ನೇತೃತ್ವದ ನಿಯೋಗ..

ಮಳೆಗಾಲದ ಸಂದರ್ಭದಲ್ಲಿ ಕಾಳಿ ನದಿಯ ಸುಮಾರು 3 ಸಾವಿರ ಟಿಎಂಸಿಗೂ ಹೆಚ್ಚು ನೀರು ಸಮುದ್ರದ ಪಾಲಾಗುತ್ತಿದೆ. ಕಾಳಿ ನದಿ ನೀರನ್ನು ಮಲಪ್ರಭೆಗೆ, ಕೃಷ್ಣಾ ನದಿ ನೀರನ್ನು ಘಟಪ್ರಭೆಗೆ ಹರಿಸುವಂತೆ ನಿರಾಣಿಯವರ ಮನವಿ ಸರಿಯಿದೆ. ಈ ಮಹತ್ವದ ಯೋಜನೆ ಜಾರಿಗೊಳಿಸಲು ಉತ್ತರ ಕರ್ನಾಟಕದ ಎಲ್ಲಾ ಮಠಾಧೀಶರು ಹಾಗೂ ರಾಜಕಾರಣಿಗಳು‌ ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿಯಲಿದೆ.‌ ಈ ಕುರಿತು ಜಲ ಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದರು.

ಇದೇ ವೇಳೆ ದೆಹಲಿಗೆ ಪ್ರಯಾಣ ಬೆಳೆಸಿದ ಉತ್ತರ ಕರ್ನಾಟಕದ ಮಠಾಧೀಶರನ್ನು ರೈತ ಮುಖಂಡರು ಶಾಲು ಹೊದಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಉಪ್ಪಾರ ಭಗೀರಥ ಪೀಠದ ಶ್ರೀ ಪುರುಷೋತ್ತಮ ಸ್ವಾಮೀಜಿ, ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಮಡಿವಾಳ ಗುರು ಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿಯವರು ಉಪಸ್ಥಿತರಿದ್ದರು.

Intro:ಹುಬ್ಬಳ್ಳಿ

ಕಾಳಿ ನದಿ‌ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯರನ್ನು ಜುಲೈ. 4 ರಂದು ದೆಹಲಿಯಲ್ಲಿ ಭೇಟಿಯಾಗಿ ಮನವರಿಕೆ ಮಾಡಲಾಗುವದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ನದಿಗಳ ‌ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಿರುವದು ಉತ್ತಮ ಬೆಳವಣಿಗೆ. ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಹಾಗೂ 500-600 ಕೆರೆಗಳ ಪುನಶ್ಚೇತನಕ್ಕೆ ಕಾಳಿ ನದಿ ಅನುಕೂಲವಾಗಲಿದೆ. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನೇ ಅಮೃತಧಾರೆ ಯೋಜನೆಯಡಿ ಕೃಷ್ಣಾ,‌ ಘಟಪ್ರಭಾ, ಮಲಪ್ರಭಾ ನದಿ ಜೋಡಣೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕಾಳಿ ನದಿಯನ್ನು ಸೇರಿಸುವಂತೆ ಒತ್ತಾಯಿಸಲಾಗುವದು ಎಂದರು.
ಮಳೆಗಾಲದ ಸಂದರ್ಭದಲ್ಲಿ ಕಾಳಿ ನದಿಯ ಸುಮಾರು 3 ಸಾವಿರ ಟಿಎಂಗೂ ಹೆಚ್ಚು ನೀರು ಸಮುದ್ರ ಪಾಲಾಗುತ್ತಿದ್ದು, ಕಾಳಿ ನದಿ ನೀರನ್ನು ಮಲಪ್ರಭೆಗೆ, ಕೃಷ್ಣಾ ನದಿ ನೀರನ್ನು ಘಟಪ್ರಭಾಗೆ ಹರಿಸುವಂತೆ ನಿರಣಿ ವರದಿ ಸರಿ ಇದೆ. ಈ ಮಹತ್ವದ ಯೋಜನೆ ಜಾರಿಗೊಳಿಸಲು ಉತ್ತರ ಕರ್ನಾಟಕದ ಎಲ್ಲಾ ಮಠಾಧೀಶರು ಹಾಗೂ ರಾಜಕಾರಣಿಗಳು‌ ಪಕ್ಷಾತೋತವಾಗಿ ಬೆಂಬಲ ನೀಡಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡಲಿ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿಯಲಿದೆ.‌ಈ ಕುರಿತು ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸುವದಾಗಿ ತಿಳಿಸಿದರು.
ಇದೇ ವೇಳೆ ದೆಹಲಿಗೆ ಪ್ರಯಾಣ ಬೆಳೆಸಿದ ಉತ್ತರ ಕರ್ನಾಟಕದ ಮಠಾಧೀಶರನ್ನು ರೈತ ಮುಖಂಡರು ಶಾಲು ಹೊದಿಸಿ ಬಿಳ್ಕೊಟ್ಟರು.
ಈ ಸಂದರ್ಭದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನ ನಂದಪುರಿ ಸ್ವಾಮೀಜಿ , ಉಪ್ಪಾರ ಭಗೀರಥ ಪೀಠದ ಶ್ರೀ ಪುರುಷೋತ್ತಮ ಸ್ವಾಮೀಜಿ, ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಪೀಠದ ಶ್ರೀ ಶಾಂತ ವೀರ ಸ್ವಾಮೀಜಿ, ಮಡಿವಾಳ ಗುರು ಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿಯವರು ಇದ್ದರು.
ಬೈಟ್ - ಬಸವಜಯ ಮೃತ್ಯುಂಜಯಸ್ವಾಮೀಜಿ, ಕೂಡಲ ಸಂಗಮ‌ ಪೀಠBody:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.